ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗಡೆ ಅಧಿಕಾರ ಸ್ವೀಕಾರ

Last Updated 6 ಮೇ 2022, 5:05 IST
ಅಕ್ಷರ ಗಾತ್ರ

ಧಾರವಾಡ: ಜಿಲ್ಲೆಯವರೇ ಆದ 2014ರ ತಂಡದ ಐಎಎಸ್ ಅಧಿಕಾರಿ ಗುರುದತ್ತ ಹೆಗಡೆ ಅವರು ಜಿಲ್ಲಾಧಿಕಾರಿಯಾಗಿ ಗುರುವಾರ ಅಧಿಕಾರ ವಹಿಸಿಕೊಂಡರು.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಹೊನ್ನಗದ್ದೆಯವರಾದ ಗುರುದತ್ತ ಅವರು, ಐಎಎಸ್ ಪ್ರೊಬೇಷನರಿ ಅವಧಿಯನ್ನು ಬೀದರ್ ಜಿಲ್ಲೆಯಲ್ಲಿ ಪೂರೈಸಿದ್ದಾರೆ. ಕೊಪ್ಪಳದ ಉಪವಿಭಾಗಾಧಿಕಾರಿಯಾಗಿ, ಮೈಸೂರು ಮಹಾಗರ ಪಾಲಿಕೆ ಆಯುಕ್ತರಾಗಿ, ಪ್ರಸ್ತುತ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯೊಂದಿಗೆ ಹೆಚ್ಚುವರಿಯಾಗಿ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಹಾಗೂ ಬಿಆರ್‌ಟಿಎಸ್‌ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ಗುರುವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಅವರು ಗುರುದತ್ತ ಅವರನ್ನು ಅಭಿನಂದಿಸಿ ಅಧಿಕಾರ ಹಸ್ತಾಂತರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ, ಧಾರವಾಡ ತಹಶೀಲ್ದಾರ್‌ ಡಾ. ಸಂತೋಷಕುಮಾರ ಬಿರಾದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT