ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಲ್ಹಾದ ಜೋಶಿ ಕ್ಷಮೆ ಕೇಳದಿದ್ದರೆ ಹೋರಾಟ: ಗುರುನಾಥ ಉಳ್ಳಿಕಾಶಿ

Published 13 ನವೆಂಬರ್ 2023, 11:27 IST
Last Updated 13 ನವೆಂಬರ್ 2023, 11:27 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಧಾರವಾಡ ಶಹರ ಠಾಣೆಯ ಇನ್‌ಸ್ಪೆಕ್ಟರ್ ಎನ್‌.ಸಿ.ಕಾಡದೇವರಮಠ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತರಾಟೆಗೆ ತೆಗೆದುಕೊಂಡು, ಸಾರ್ವಜನಿಕವಾಗಿ ಅವಮಾನಿಸಿದ್ದನ್ನು ಸಮತಾ ಸೇನಾ ಕರ್ನಾಟಕ ಸಂಘಟನೆ ಖಂಡಿಸಿದೆ.

‘ಈ ಹಿಂದೆ ರಾಜ್ಯದಲ್ಲಿ ತಮ್ಮ ಸರ್ಕಾರ ಇದ್ದಾಗ ಪೊಲೀಸ್‌ ಅಧಿಕಾರಿಗಳನ್ನು ಬಳಸಿಕೊಂಡು ಅಮಾಯಕರ ವಿರುದ್ಧ ಪ್ರಕರಣ ದಾಖಲಿಸಿ, ಗೂಂಡಾ ಕಾಯ್ದೆಯಡಿ ಬಂಧಿಸಿದ್ದನ್ನು ಕೇಂದ್ರ ಸಚಿವರು ಮರೆತಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಕಾರಣಕ್ಕೆ ಜನಸ್ಪಂದನ ಹೆಸರಲ್ಲಿ ಪೊಲೀಸ್‌ ಅಧಿಕಾರಿಯನ್ನು ಅವಮಾನಿಸಿದ್ದು ಸರಿಯಲ್ಲ’ ಎಂದು ಸಂಘಟನೆಯ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ ಹೇಳಿದ್ದಾರೆ.

‘ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲು ಜನಪ್ರತಿನಿಧಿಗಳಿಗೆ ಸಂವಿಧಾನಬದ್ಧವಾದ ಹಲವು ವೇದಿಕೆಗಳಿವೆ. ಅದನ್ನು ಅನುಸರಿಸದೆ ತಮ್ಮ ಹುದ್ದೆಯ ಗೌರವಕ್ಕೆ ಧಕ್ಕೆ ಬರುವ ರೀತಿ ನಡೆದುಕೊಂಡಿದ್ದಾರೆ’ ಎಂದಿದ್ದಾರೆ.

‘ಕೇಂದ್ರ ಸಚಿವರು ಸಂವಿಧಾನವನ್ನು ಗೌರವಿಸುವುದಾದರೆ ಕೂಡಲೇ ಪೊಲೀಸ್ ಅಧಿಕಾರಿಯ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT