ಬುಧವಾರ, ಜೂನ್ 16, 2021
28 °C

ದುಪ್ಪಟ್ಟು ದರಕ್ಕೆ ಗುಟ್ಕಾ ಮಾರಾಟ; ರಸ್ತೆಯಲ್ಲೇ ಹೊಡೆದಾಟ, ವೈರಲ್ ಆದ ವಿಡಿಯೊ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ನಗರದ ಬಾರದಾನ ಸಾಲ್ ಸಮೀಪ ಗುಟ್ಕಾವನ್ನು ದುಪ್ಪಟ್ಟು ದರಕ್ಕೆ ಮಾರಾಟ ಮಾಡುತ್ತಿದ್ದ ಕಾರಣದಿಂದ ಅಂಗಡಿಯ ಮಾಲೀಕ ಹಾಗೂ ಗ್ರಾಹಕರ ನಡುವೆ ಮಾತಿಗೆ ಮಾತು ಬೆಳೆದು ರಸ್ತೆಯಲ್ಲೇ ಹೊಡೆದಾಡಿಕೊಂಡ ವಿಡಿಯೊ ವೈರಲ್‌ ಆಗಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳಲ್ಲದ ಅಂಗಡಿಗಳನ್ನು ಬಂದ್‌ ಮಾಡಲಾಗಿದೆ. ಹೀಗಾಗಿ ಗುಟ್ಟಾಗಿ ಗುಟ್ಕಾ ಮಾರಾಟ ಮಾಡಲಾಗುತ್ತಿತ್ತು. ನಿಗದಿಗಿಂತಲೂ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದು ಖರೀದಿದಾರರ ಆಕ್ರೋಶಕ್ಕೆ ಕಾರಣವಾಗಿದೆ. ನಾಲ್ಕೈದು ಜನ ಸೇರಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ದೃಶ್ಯ ವಿಡಿಯೊದಲ್ಲಿದೆ.

ಹೊಡೆದಾಡಿಕೊಂಡ ಸಂದರ್ಭವನ್ನು ಸ್ಥಳೀಯರು ಮೊಬೈಲ್‌ ಫೋನ್‌ನಲ್ಲಿ ಸೆರೆ ಹಿಡಿದಿದ್ದಾರೆ. ಘಂಟಿಕೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು