ಗುಡಗೇರಿ: ಸಾಲ ಹಾಗೂ ಬೆಳೆ ನಷ್ಟದಿಂದ ಮನನೊಂದ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ರೈತ ಶಿವಾನಂದ ವಿರುಪಾಕ್ಷಪ್ಪ ಹೂಗಾರ (64) ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಜರುಗಿದೆ.

ಅವರು ತಮ್ಮ ಜಮೀನು ಸಾಗುವಳಿಗಾಗಿ ಹಿರೇಹರಕುಣಿಯ ಕೆವಿಜಿ ಬ್ಯಾಂಕ್ನಲ್ಲಿ ₹2 ಲಕ್ಷ ಬೆಳೆ ಸಾಲ ಮಾಡಿದ್ದರು. ಬೆಳೆ ಬಾರದೇ, ಬೆಳೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೆ ತೀವ್ರ ನಷ್ಟ ಅನುಭವಿಸಿದ್ದರು. ಇದರಿಂದ ನೊಂದಿದ್ದ ಅವರು ಶುಕ್ರವಾರ ಬೆಳಿಗ್ಗೆ ತರ್ಲಘಟ್ಟ ಗ್ರಾಮದ ತಮ್ಮದೇ ಹೊಲದ ಶೆಡ್ನಲ್ಲಿ ಕ್ರಿಮಿ ನಾಶಕ ಕುಡಿದಿದ್ದರು. ಅವರನ್ನು ಚಿಕಿತ್ಸೆಗಾಗಿ ಕುಂದಗೋಳದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಗುಡಗೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕುಂದಗೋಳ ತಾಲ್ಲೂಕು ಆಸ್ಪತ್ರೆಗೆ ಶಾಸಕ ಎಂ.ಆರ್. ಪಾಟೀಲ್ ಭೇಟಿ ನೀಡಿ ಮೃತರಕುಟುಂಬಕ್ಕೆ ಸಾಂತ್ವನ ಹೇಳಿದರು. ತಹಶೀಲ್ದಾರ್ ರಾಜು ಮಾವರಕರ ಇದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-24-1783316209

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.