ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

7
ಹಾವೇರಿ ವಿದ್ಯಾರ್ಥಿನಿ ಕೊಲೆ ಪ್ರಕರಣ

ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

Published:
Updated:

ಹುಬ್ಬಳ್ಳಿ: ಹಾವೇರಿಯ ಸವಣೂರಿನಲ್ಲಿ ನಡೆದ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಪೂರ್ವ ವಿಧಾನಸಭಾ ‌ಕ್ಷೇತ್ರದ ಕಾರ್ಯಕರ್ತರು ಇಲ್ಲಿನ ದುರ್ಗದ ಬೈಲ್ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಮಗಳು 6ನೇ ತಾರೀಖು ಕಾಣೆಯಾಗಿದ್ದ ಬಗ್ಗೆ ‍ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಮೂರು ದಿನವಾದರೂ ಆಕೆಯನ್ನು ಪತ್ತೆ ಮಾಡಲಿಲ್ಲ. ಕೊನೆಗೆ ಶವ ಪತ್ತೆಯಾಗಿದೆ. ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಬಿಜೆಪಿ ಪೂರ್ವ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಶಿವು ಮೆಣಸಿನಕಾಯಿ ಮಾತನಾಡಿ, ಆಕೆಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಸುಟ್ಟು ಹಾಕಲು ಪ್ರಯತ್ನಿಸಿದ್ದಾರೆ. ಪ್ರಕರಣದ ಆರೋಪಿಗಳನ್ನು ಈ ಕೂಡಲೇ ಬಂಧಿಸಬೇಕು. ಅವರಿಗೆ ಜಾಮೀನು ಸಿಗದಂತೆ ಹಾಗೂ ಗಲ್ಲು ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಗೃಹ ಸಚಿವರು ಈ ಪ್ರಕರಣದ ನೈತಿಕ ಹೊಣೆ ಹೊರಬೇಕು. ಇನ್ನು ಮೂರು ದಿನಗಳಲ್ಲಿ ಆರೋಪಿಗಳನ್ನು ಬಂಧಿಸದಿದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪಕ್ಷದ ಧಾರವಾಡ ವಿಭಾಗದ ಸಹ ಪ್ರಭಾರಿ ಮಹೇಶ ತೆಂಗಿನಕಾಯಿ, ವಕ್ತಾರ ಹನುಮಂತಪ್ಪ, ಮುಖಂಡರಾದ ಸತೀಶ ಶೇಜವಾಡಕರ್, ಸಿದ್ದು ಮೊಗಲಿಶೆಟ್ಟರ, ಜಗದೀಶ ಬುಳವಣ್ಣರ್, ಸಂಗಮಂಜಿ, ಶಂಕರಪ್ಪ ಛಬ್ಬಿ ಇದ್ದರು.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !