ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹವ್ಯಕ ಹಬ್ಬ, ಪ್ರತಿಭಾ ಪುರಸ್ಕಾರ 26ಕ್ಕೆ

Last Updated 22 ಜೂನ್ 2022, 2:32 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹುಬ್ಬಳ್ಳಿ– ಧಾರವಾಡ ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯು ನಗರದ ಲೂತಿಮಠ ಬಡಾವಣೆಯ ಲೋಕಮಾನ್ಯ ತಿಲಕ್ ರಸ್ತೆಯಲ್ಲಿರುವ ಹವ್ಯಕ ಭವನದಲ್ಲಿ ಜೂನ್ 26ರಂದು ಬೆಳಿಗ್ಗೆ 11ಕ್ಕೆ ಹವ್ಯಕ ಹಬ್ಬ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದೆ.

ಶಿರಸಿಯ ಉದ್ಯಮಿ ಮತ್ತು ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಮತ್ತು ಲೋಕಶಿಕ್ಷಣ ಟ್ರಸ್ಟ್ ಸಿಇಒ ಮೋಹನ ಹೆಗಡೆ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ನೈರುತ್ಯ ರೈಲ್ವೆಯ ಐಆರ್‌ಟಿಎಸ್ ಅಧಿಕಾರಿ ಸಂತೋಷ ಹೆಗಡೆ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ ಹೆಗಡೆ ಪಾಲ್ಗೊಳ್ಳಲಿದ್ದು, ಸಂಸ್ಥೆಯ ಅಧ್ಯಕ್ಷ ವಿ.ಎಂ. ಭಟ್ಟ ಅಧ್ಯಕ್ಷತೆ ವಹಿಸಲಿದ್ದಾರೆ.

ಅಂದು ಬೆಳಿಗ್ಗೆ 8ಕ್ಕೆ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಬೆ.10ರಿಂದ 11ರವರೆಗೆ ಸಿರಿಧಾನ್ಯಗಳ ಅಡುಗೆ ಸ್ಪರ್ಧೆ ಮತ್ತು ಪ್ರದರ್ಶನ, ಹವ್ಯಕರ ಹಬ್ಬದ ಹಾಡಿನ ಸ್ಪರ್ಧೆ ಜರುಗಲಿದೆ. ಬೆ.11ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ನಡೆಯಲಿದೆ.

ಮಧ್ಯಾಹ್ನ 1.30ಕ್ಕೆ ಹವ್ಯಕ ಭೋಜನ, 3ರಿಂದ 4ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸಂಜೆ 4ರಿಂದ ರಾತ್ರಿ 8ರವರೆಗೆ ಪೌರಾಣಿಕ ಯಕ್ಷಗಾನ ‘ದಮಯಂತಿ ಪುನಃ ಸ್ವಯಂವರ’ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT