ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಮೇ 28ಕ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆಯ 21ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳಿಗೆ ಮೇ 28ರಂದು ಚುನಾವಣೆ ನಡೆಯಲಿದೆ.
ಮೇಯರ್ ಸ್ಥಾನವು ಸಾಮಾನ್ಯ ವರ್ಗಕ್ಕೆ ಮತ್ತು ಉಪ ಮೇಯರ್ ಸ್ಥಾನವು ಸಾಮಾನ್ಯ ಮಹಿಳಾ ವರ್ಗಕ್ಕೆ ಮೀಸಲಾಗಿದೆ. ಹುಬ್ಬಳ್ಳಿಯಲ್ಲಿರುವ ಪಾಲಿಕೆಯ ಸಭಾಂಗಣದಲ್ಲಿ ಚುನಾವಣೆ ನಡೆಯಲಿದೆ. ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಆಮ್ಲನ್ ಆದಿತ್ಯ ಬಿಸ್ವಾಸ್ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 3ಕ್ಕೆ ಸಭೆ ಪ್ರಾರಂಭವಾಗಲಿದೆ. ನಾಮಪತ್ರಗಳ ಪರಿಶೀಲನೆ ನಂತರ ಉಮೇದುವಾರರ ಘೋಷಣೆ ಮತ್ತು ನಾಮಪತ್ರ ಹಿಂಪಡೆಯಲು ಅವಕಾಶ ಕಲ್ಪಿಸಲಾಗುವುದು. ಅಗತ್ಯವಿದ್ದರೆ ಕೈ ಎತ್ತುವ ಮೂಲಕ ಮತದಾನ ನಡೆಸಿ, ಮೇಯರ್ ಹಾಗೂ ಉಪ ಮೇಯರ್ ಅವರನ್ನು ಆಯ್ಕೆ ಮಾಡಲಾಗುವುದು ಎಂದು ಪಾಲಿಕೆ ಆಯುಕ್ತ ಡಾ. ಗೋಪಾಲಕೃಷ್ಣ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.