ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಹೆಡ್‌ ಕಾನ್‌ಸ್ಟೆಬಲ್‌ ಆತ್ಮಹತ್ಯೆ

Published 27 ಮೇ 2024, 15:14 IST
Last Updated 27 ಮೇ 2024, 15:14 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಲ್ಲಿನ ಉತ್ತರ ಸಂಚಾರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ನಾಗಪ್ಪ ಹಂಚನಮನಿ (45) ಅವರು ನಗರದ ರೈಲು ನಿಲ್ಗಾಣದ ಬಳಿ ವಿಶ್ವಮಾನವ ಎಕ್ಸ್‌ಪ್ರೆಸ್‌ ರೈಲಿಗೆ ತಲೆಕೊಟ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಹುಬ್ಬಳ್ಳಿ ತಾಲ್ಲೂಕಿನ ಅರಳಿಕಟ್ಟಿ ಗ್ರಾಮದ ಅವರು ಉಣಕಲ್‌ನಲ್ಲಿ ವಾಸವಾಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ.

2002ನೇ ಬ್ಯಾಚ್‌ನಲ್ಲಿ ಪೊಲೀಸ್‌ ಇಲಾಖೆ ಸೇರ್ಪಡೆಯಾಗಿದ್ದ ಅವರು ಹುಬ್ಬಳ್ಳಿ–ಧಾರವಾಡ ಮಹಾನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2023ರ ಆಗಸ್ಟ್‌ನಲ್ಲಿ ವಿದ್ಯಾನಗರ ಪೊಲೀಸ್‌ ಠಾಣೆಯಿಂದ ಉತ್ತರ ಸಂಚಾರ ಪೊಲೀಸ್‌ ಠಾಣೆಗೆ ವರ್ಗಾವಣೆ ಆಗಿದ್ದರು. ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದರು.

ಮೃತ ದೇಹವನ್ನು ಕಿಮ್ಸ್‌ ಶವಾಗಾರಕ್ಕೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹುಬ್ಬಳ್ಳಿಯ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT