ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಸಹಿತ ಜೋರು ಮಳೆ

Last Updated 19 ಮಾರ್ಚ್ 2022, 2:35 IST
ಅಕ್ಷರ ಗಾತ್ರ

ಕಲಘಟಗಿ: ತಾಲ್ಲೂಕಿನಾದ್ಯಂತ ಭಾರಿ ಗಾಳಿ, ಸಿಡಿಲು ಸಹಿತ ಅಲ್ಲಲಿ ಆಲಿಕಲ್ಲು ಮಳೆ ಸುರಿದು ಗಿಡ ಮರ, ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ.

ತಾಲ್ಲೂಕಿನ ತುಮರಿಕೊಪ್ಪ ಗ್ರಾಮದ ರಸ್ತೆಯ ಪಕ್ಕದ ಮರ ವಿದ್ಯುತ್ ತಂತಿ ಮೇಲೆ ಬಿದ್ದು ಕಂಬ ಮುರಿದು ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಹುಲ್ಲಂಬಿ ಗ್ರಾಮದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಕೆಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿತ್ತು. ಇಷ್ಟು ದಿನ ಬಿಸಿಲಿನ ತಾಪಮಾನ ಹೆಚ್ಚಾಗಿತ್ತು. ಈಗ ವರ್ಷದ ಮೊದಲ ಮಳೆ ಸುರಿದು ಎಲ್ಲ ಕಡೆ ತಂಪಾದ ವಾತಾವರಣ ಉಂಟಾಗಿದೆ.

ಹೋಳಿ ಹುಣ್ಣಿಮೆ ಅಂಗವಾಗಿ ಕಾಮದಹನ ಮಾಡಿದ ಮೇಲೆ ಮಳೆಯಾಗಿದ್ದರಿಂದ ಇದು ಕಾಮಣ್ಣನ ಕಣ್ಣೀರು ಎಂದು ಕೂಡಾ ಕರೆಯುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT