ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವಲಗುಂದ: ಬರ ನಿರ್ವಹಣೆಗೆ ಸಹಾಯವಾಣಿ ಆರಂಭ

Published 7 ಮಾರ್ಚ್ 2024, 15:31 IST
Last Updated 7 ಮಾರ್ಚ್ 2024, 15:31 IST
ಅಕ್ಷರ ಗಾತ್ರ

ನವಲಗುಂದ: ತಾಲ್ಲೂಕಿನಲ್ಲಿ ಬರ ನಿರ್ವಹಣೆ ಹಾಗೂ ಕುಡಿಯುವ ನೀರಿನ ಸಹಾಯವಾಣಿಯನ್ನು ತಾಲ್ಲೂಕು ಆಡಳಿತ ಆರಂಭಿಸಿದೆ ಎಂದು ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ತಿಳಿಸಿದ್ದಾರೆ.

ಬರ ನಿರ್ವಹಣೆ, ಮೇವಿನ ಸಮಸ್ಯೆ ಹಾಗೂ ಕುಡಿಯುವ ನೀರಿನ ಸಮಸ್ಯೆಯ ವಿಷಯವಾಗಿ ತಹಶೀಲ್ದಾರ್‌ ಕಚೇರಿಯಲ್ಲಿ 08380229240 ಸಹಾಯವಾಣಿ ಕೇಂದ್ರ ತೆರೆದಿದೆ.

ತಾಲ್ಲೂಕಿನ ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿ ಪ್ರದೇಶಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆಗಳ ಕುರಿತು ತಹಶೀಲ್ದಾರ್ ಕಾರ್ಯಾಲಯದ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ.

‘ಮುಂದಿನ ದಿನಗಳಲ್ಲಿ ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೋಲಾಗದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು’ ಎಂದು ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT