ಸೋಮವಾರ, ಜನವರಿ 27, 2020
26 °C

‘ಜೆಎನ್‌ಯು ಘರ್ಷಣೆ: ಉನ್ನತ ಮಟ್ಟದ ತನಿಖೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ‘ದೆಹಲಿಯ ಜವಾಹರಲಾಲ್ ವಿಶ್ವವಿದ್ಯಾಲಯಕ್ಕೆ ಗುಂಪೊಂದು ನುಗ್ಗಿ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ನಡೆದಿರುವ ಹಲ್ಲೆಯನ್ನು ಬಿಜೆಪಿ ಖಂಡಿಸಲಿದೆ. ಜತೆಗೆ, ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೇಲ್ನೋಟಕ್ಕೆ ಇದು ಎರಡು ಗುಂಪುಗಳ ನಡುವಿನ ಘರ್ಷಣೆ ಎಂದು ಕಂಡುಬಂದಿದೆ. ಆದರೆ, ಕಾಂಗ್ರೆಸ್‌ನವರು ಘಟನೆ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸುವ ಮೂಲಕ, ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ವಿಶ್ವವಿದ್ಯಾಲಯದಲ್ಲಿ ಹಿಂದಿನಿಂದಲೂ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಇದೇ ಹಿನ್ನೆಲೆಯಲ್ಲಿ ಘರ್ಷಣೆ ನಡೆದಿರುವ ಸಾಧ್ಯತೆ ಇದೆ. ಹಾಗಾಗಿ, ಆ ಬಗ್ಗೆಯೂ ತನಿಖೆ ನಡೆಯಲಿದೆ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು