ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲವ್ ಜಿಹಾದ್: ಹಿಂದೂ ಜನಜಾಗೃತಿ ಸಮಿತಿ ಪ್ರತಿಭಟನೆ

ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣ
Last Updated 18 ನವೆಂಬರ್ 2022, 7:35 IST
ಅಕ್ಷರ ಗಾತ್ರ

ಹುಬ್ಬಳ್ಳಿ: ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ರಣರಾಗಿಣಿ ಘಟಕದ ಸದಸ್ಯರು ಒತ್ತಾಯಿಸಿದ್ದಾರೆ.

ನಗರದ ಮಿನಿವಿಧಾನ ಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ, ರಾಜ್ಯದಲ್ಲಿಯೂ ಲವ್ ಜಿಹಾದ್ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿವೆ. ಈ ಕುರಿತು ಸರ್ಕಾರ ಕಠಿಣಕ್ರಮ ತೆಗೆದುಕೊಳ್ಳಬೇಕೆಂದು ತಹಶೀಲ್ದಾರ್'ಗೆ ಮನವಿ ಸಲ್ಲಿಸಿದರು.

'ಮುಂಬೈ ಮೂಲದ ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿಯೊಬ್ಬ 35 ತುಂಡುಗಳಾಗಿ ಕತ್ತರಿಸಿ, ಬರ್ಬರವಾಗಿ ಹತ್ಯೆಗೈದಿದ್ದು, ಅದರ ಹಿಂದೆ ಲವ್ ಜಿಹಾದ್ ಇರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣ ಮಾಸುವ ಮುನ್ನವೇ ರಾಯಚೂರಿನಲ್ಲಿ ಹಿಂದೂ ಯುವತಿಯನ್ನು ಲವ್ ಜಿಹಾದ್'ಗೆ ಒಳಪಡಿಸಿದ ಪ್ರಕರಣ ಪತ್ತೆಯಾಗಿದೆ. ಉತ್ತರ ಪ್ರದೇಶ ಲಕ್ನೋದಲ್ಲಿಯೂ ಇಂತಹದ್ದೇ ಪ್ತಕರಣಗಳು ನಡೆಯುತ್ತಿವೆ. ಲವ್ ಜಿಹಾದ್ ತಡೆಯಲು ಕಠಿಣವಾದ 'ಲವ್ ಜಿಹಾದ್ ಕಾಯ್ದೆ' ಜಾರಿಗೆ ತರಬೇಕು' ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಘಟಕದ ಸಂಯೋಜಕಿ ಕವಿತಾ, ರೂಪಾ ದವಳಗಿ, ವಿದುಲಾ ಹಳದಿಪುರ, ಗೀತಾಂಜಲಿ,ಸುಧಾಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT