ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಅಹಿಂದ್ ರತ್ನ ಪ್ರಶಸ್ತಿ’ ಪ್ರದಾನ ಸಮಾರಂಭ; ಪೂರ್ವಭಾವಿ ಸಭೆ

Published 30 ಜೂನ್ 2024, 15:33 IST
Last Updated 30 ಜೂನ್ 2024, 15:33 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕರ್ನಾಟಕ ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತರ ಒಕ್ಕೂಟದ (ಅಹಿಂದ) ರಾಜ್ಯ ಕಾರ್ಯಕಾರಿಣಿ ಸಭೆ ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ಭಾನುವಾರ ಜರುಗಿತು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮುತ್ತಣ್ಣ ಶಿವಳ್ಳಿ ಅಧ್ಯಕ್ಷತೆ ವಹಿಸಿದ್ದರು. ಅಹಿಂದ ಸಂಘಟನೆಯನ್ನು ಬಲಪಡಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನದ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡು, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 50 ಗಣ್ಯರಿಗೆ ‘ಸಿದ್ದರಾಮಯ್ಯ ಅಹಿಂದ ರತ್ನ ಪ್ರಶಸ್ತಿ’ ಪ್ರದಾನ ಮಾಡಲು ನಿರ್ಣಯ ಕೈಗೊಳ್ಳಲಾಯಿತು.

ಶೀಘ್ರದಲ್ಲಿ ಇನ್ನೊಮ್ಮೆ ಸಭೆ ನಡೆಸಿ ಸಮಾವೇಶದ ಯಶಸ್ಸಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗುವುದು ಎಂದು ಮುತ್ತಣ್ಣ ಶಿವಳ್ಳಿ ಹೇಳಿದರು.

‌ಪ್ರಭುಲಿಂಗ ದೊಡ್ಮನಿ, ಸಿ.ಎಂ.ಕರಡಿಕೊಪ್ಪ, ಮಾಚಣ್ಣವರ, ರಾಜಶೇಖರ ಮೆಣಸಿನಕಾಯಿ, ಬಿ.ಎ.ಮುಧೋಳ, ಬೀರಲಿಂಗ ಪೂಜಾರಿ, ಯೂಸೂಫ್ ಖಾನ್ ಬಳ್ಳಾರಿ, ಗುರುನಾಥಗೌಡ ಪಾಟೀಲ, ನಿರ್ಮಲಾ ಹೊಂಗಲ್, ರತ್ನ ಗಿಡವೀರಣ್ಣವರ, ರತ್ನ ಕಾಮನಹಳ್ಳಿ, ಜೈನಜಬಿ ಒಂಟಿಕುದುರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT