ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ ವಿದ್ಯಾರ್ಥಿಗಳು ಮನೆಗೆ!

Last Updated 19 ಫೆಬ್ರುವರಿ 2020, 12:05 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಕೆಎಲ್‌ಇ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಓದುತ್ತಿರುವ ಮೂವರು ಕಾಶ್ಮೀರದ ವಿದ್ಯಾರ್ಥಿಗಳು ದೇಶದ್ರೋಹ ಕಾಯ್ದೆಯಡಿ ಬಂಧನವಾಗುತ್ತಿದ್ದಂತೆಯೇ, ಅದೇ ಕಾಲೇಜಿನಲ್ಲಿ ಕಂಪ್ಯೂಟರ್‌ ಸೈನ್ಸ್‌ ವಿಭಾಗದಲ್ಲಿ ಓದುತ್ತಿದ್ದ ಕಾಶ್ಮೀರದ ನಾಲ್ವರು ವಿದ್ಯಾರ್ಥಿಗಳನ್ನು ಮುಂಜಾಗ್ರತಾ ಕ್ರಮವಾಗಿ ಮನೆಗೆ ಕಳುಹಿಸಲಾಗಿದೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಡಿಯೊ ವೈರಲ್‌ ಆಗುತ್ತಿದ್ದಂತೆಯೇ ವಿಶ್ವ ಹಿಂದೂ ಪರಿಷತ್‌, ಎಬಿವಿಪಿ ಸಂಘಟನೆಗಳು ಹಾಗೂ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು. ಬಜರಂಗದಳ ಕಾರ್ಯಕರ್ತರು ಕಾಲೇಜಿನಲ್ಲಿಯೇ ಆರೋಪಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಇನ್ನುಳಿದ ಕಾಶ್ಮೀರದ ವಿದ್ಯಾರ್ಥಿಗಳನ್ನು ಸಹ ಹೊರಹಾಕಬೇಕು ಎಂದು ಆಗ್ರಹಿಸಿದರು.

ಕೊಟಗುಣಸಿಯಲ್ಲಿರುವ ಕೆಎಲ್‌ಇ ಕಾಲೇಜಿನ ವಸತಿ ಗೃಹದಲ್ಲಿರುವ ಕಾಶ್ಮೀರದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಬಹುದು ಎಂಬ ಆತಂಕವಿದೆ. ಪರಿಸ್ಥಿತಿ ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ಮೇಲಿನ ಕ್ರಮಕ್ಕೆ ಮುಂದಾಗಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕಾಲೇಜಿನ ಪ್ರಾಚಾರ್ಯ ಬಸವರಾಜ ಅನಾಮಿ, ‘ಕಾಲೇಜಿನಲ್ಲಿ ಈಗ ಎಲ್ಲವೂ ಶಾಂತವಾಗಿದೆ. ತರಗತಿಗಳು ಎಂದಿನಂತೆ ನಡೆದಿವೆ. ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT