ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, ಪಾಲಕರ ಮೇಲೆ ಹೆಜ್ಜೇನು ದಾಳಿ

Last Updated 4 ಏಪ್ರಿಲ್ 2022, 7:09 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಿದ್ದ ವೇಳೆಯಲ್ಲಿಯೇ ಪಾಲಕರು ಹಾಗೂ ವಿದ್ಯಾರ್ಥಿಗಳ ಮೇಲೆ ಸೋಮವಾರ ಹೆಜ್ಜೇನು ದಾಳಿ ಮಾಡಿ ಆತಂಕ ಸೃಷ್ಟಿಸಿದ ಘಟನೆ ಕೇಶ್ವಾಪುರದ ಸೇಂಟ್ ಮೈಕಲ್ ಶಾಲೆಯಲ್ಲಿ ಸಂಭವಿಸಿದೆ.

ಮಾಹಿತಿ ತಿಳಿಯುತ್ತಿದ್ದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ರಗ್ಗು ಹೊತ್ತು ಬೆಂಕಿ ಹಚ್ಚಿ ಹೆಜ್ಜೇನು ದಾಳಿಯಿಂದ ಮಕ್ಕಳನ್ನು ರಕ್ಷಿಸಿದ್ದಾರೆ.

10ನೇ ತರಗತಿಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಬಂದಿದ್ದರು. ಆಗ ಓರ್ವ ವಿದ್ಯಾರ್ಥಿ ಸೇರಿದಂತೆ ಪಾಲಕರ ಮೇಲೆ ಹೆಜ್ಜೇನುಗಳು ದಾಳಿ ಮಾಡಿವೆ. ಹೆಜ್ಜೇನುಗಳನ್ನು ಓಡಿಸಲು ಪೊಲೀಸರು ಶಾಲೆ ಬಳಿ ಬೆಂಕಿ ಹಾಕಿದರು. ಶಾಲೆಯ ಅಕ್ಕಪಕ್ಕದ ಮನೆಯವರು ವಿದ್ಯಾರ್ಥಿಗಳ‌ ಮೈಗೆ ಹೊದಿಕೆಗಳನ್ನು ಮುಚ್ಚಿ ಹೆಜ್ಜೇನುಗಳ ದಾಳಿ ತಪ್ಪಿಸಿದರು.

ಶಾಲಾ ಶಿಕ್ಷಕರ ಮೇಲೂ ಹೆಜ್ಜೇನುಗಳು ದಾಳಿ ನಡೆಸಿವೆ. ಗಾಯಾಳುಗಳನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಘಟನೆ ಹಿನ್ನೆಲೆಯಲ್ಲಿ ಕೇಶ್ವಾಪುರದ ಸರ್ವೋದಯ ವೃತ್ತದಿಂದ ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರ ಹಳೇ ಕಚೇರಿ ರಸ್ತೆಯನ್ನು ಕೆಲ ಹೊತ್ತು ಬಂದ್ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT