ಶನಿವಾರ, ಜುಲೈ 31, 2021
27 °C

ಹುಬ್ಬಳ್ಳಿ | ಕೊರೊನಾದಿಂದ ಗುಣಮುಖರಾದ ಪೊಲೀಸ್ ಕಾನ್‌ಸ್ಟೆಬಲ್‌ಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕೊರೊನಾ ಸೋಂಕಿನಿಂದ ಗುಣಮುಖವಾಗಿ ಕಿಮ್ಸ್ ಆಸ್ಪತ್ರೆಯಿಂದ ಭಾನುವಾರ ಬಿಡುಗಡೆಯಾದ ಇಲ್ಲಿನ ಉಪನಗರ ಠಾಣೆಯ ಪೊಲೀಸ್ ‌ಕಾನ್‌ಸ್ಟೆಬಲ್ ಅವರಿಗೆ ಠಾಣೆ ಸಿಬ್ಬಂದಿ ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದರು.

ತಮ್ಮ ಇಲಾಖೆಯ ಸಿಬ್ಬಂದಿಯನ್ನು  ಸ್ವಾಗತಿಸಲು ಖುದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಬಂದಿದ್ದರು. ಚೇತರಿಸಿಕೊಂಡ ಪೊಲೀಸ್‌ಗೆ ಮೈಸೂರು ಪೇಟ, ಶಾಲು, ಹೂವಿನ ಮಾಲೆ ಹಾಕಿ ಸನ್ಮಾನಿಸಿದರು.

ಹುಬ್ಬಳ್ಳಿಯಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖವಾಗಿ ಹೊರಬಂದ ಮೊದಲ ಪೊಲೀಸ್ ಇವರಾಗಿದ್ದಾರೆ.

ಕಳ್ಳತನದ ಆರೋಪದಲ್ಲಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬರಿಂದ ಈ ಪೊಲೀಸ್ ಗೆ ಸೋಂಕು ತಗುಲಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು