ಹೊರಟ್ಟಿಗೆ ಸಚಿವ ಸ್ಥಾನಕ್ಕೆ ಆಗ್ರಹ

7
ಶಿಕ್ಷಣ ಸಂಘಟನೆಗಳಿಂದ ಪ್ರತಿಭಟನೆ

ಹೊರಟ್ಟಿಗೆ ಸಚಿವ ಸ್ಥಾನಕ್ಕೆ ಆಗ್ರಹ

Published:
Updated:
ಹುಬ್ಬಳ್ಳಿಯಲ್ಲಿ ಬಸವರಾಜ ಹೊರಟ್ಟಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಸಿ ಶಿಕ್ಷಕರ ಸಂಘಟನೆಗಳು ಪ್ರತಿಭಟನೆ ನಡೆಸಿದವು

ಹುಬ್ಬಳ್ಳಿ: ವಿಧಾನ ಪರಿಷತ್‌ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು  ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಹಾಗೂ ವಿವಿಧ ಶಿಕ್ಷಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಶಿಕ್ಷಕರು ಶನಿವಾರ ಇಲ್ಲಿ ಪ್ರತಿಭಟಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಎಂ.ಬಿ.ನಾತು, ’ 38 ವರ್ಷಗಳಿಂದ ಹೊರಟ್ಟಿ ವಿಧಾನ ಪರಿಷತ್‌ ಸದಸ್ಯರಾಗಿದ್ದಾರೆ. ಅವರಿಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಅರಿವಿದೆ. ಅಲ್ಲದೇ ಪಕ್ಷ ನಿಷ್ಠೆಯನ್ನು ಮೆರೆದಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿದ್ದರೆ ಶಿಕ್ಷಕ ಸಮುದಾಯದಲ್ಲಿನ ವೇತನ ತಾರತಮ್ಯ, ವರ್ಗಾವಣೆ ಸೇರಿ ಹಲವಾರು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುತ್ತಿದ್ದರು’ ಎಂದರು.

ಹೊರಟ್ಟಿ ಅವರಿಗೆ ಆದ ಅನ್ಯಾಯ ಶಿಕ್ಷಕ ಸಮುದಾಯಕ್ಕೆ ಆದ ಅನ್ಯಾಯವಾಗಿದೆ. ಈ ಅನ್ಯಾಯವನ್ನು ಶಿಕ್ಷಕ ಸಮುದಾಯ ಖಂಡಿಸುತ್ತದೆ. ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ,ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಸಚಿವ ಸ್ಥಾನ ನೀಡಲು ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಜಿ.ಆರ್.ಭಟ್ಟ, ಡಾ.ಬಸವರಾಜ ಧಾರವಾಡ, ಎಸ್‌.ಎಸ್. ಅಂಗಡಿ, ಪ್ರಭಾಕರ ಭಂಟ್ ಇದ್ದರು. ಪ್ರತಿಭಟನಾ ರ‍್ಯಾಲಿಯು ನೆಹರು ಮೈದಾನದಿಂದ ಚನ್ನಮ್ಮ ಸರ್ಕಲ್, ಸಂಗೊಳ್ಳಿ ರಾಯಣ್ಣ ಸರ್ಕಲ್, ದಾಜಿಬಾನ್ ಪೇಟೆ ಮೂಲಕ ಸಂಚರಿಸಿ ಮೂರುಸಾವಿರ ಮಠದ ಮೈದಾನದಲ್ಲಿ ಬಂದು ತಲುಪಿತು.

ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ, ಕರ್ನಾಟಕ ವಿಶ್ವವಿದ್ಯಾಲಯ ಕಾಲೇಜು ಶಿಕ್ಷಕರ ಸಂಘ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪ್ರಾಧ್ಯಾಪಕರ ಸಂಘ, ಕರ್ನಾಟಕ ಚಿತ್ರಕಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ, ಕರ್ನಾಟಕ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಅನುದಾನ ರಹಿತ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘ, ಖಾಸಗಿ ಡಿಪ್ಲೊಮಾ, ಪಾಲಿಟೆಕ್ನಿಕ್ ಐಟಿಐ ನೌಕರರ ಸಂಘ, ಪದವಿ ಕಾಲೇಜುಗಳ ಗ್ರಂಥಪಾಲಕರ ಸಂಘ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ಸಹಕಾರ ಸಂಘ, ಕೃಷಿ ವಿಶ್ವವಿದ್ಯಾಲಯ ಉಪನ್ಯಾಸಕರ ಸಂಘ, ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಸಂಘ, ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಹಾಗೂ ಕಾಲೇಜು ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ ಸೇರಿ 25ಕ್ಕೂ ಹೆಚ್ಚು ಶಿಕ್ಷಕ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !