ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಲಿಮ್ಕಾ ಬುಕ್ ಆಫ್‌ ರೆಕಾರ್ಡ್ಸ್‌ಗೆ ಸೇರಿದ ಹೊರಟ್ಟಿ

Published : 24 ಜನವರಿ 2024, 15:46 IST
Last Updated : 24 ಜನವರಿ 2024, 15:46 IST
ಫಾಲೋ ಮಾಡಿ
Comments

ಹುಬ್ಬಳ್ಳಿ: ದೀರ್ಘಾವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ ಬಸವರಾಜ ಹೊರಟ್ಟಿ ಅವರ ಹೆಸರು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ.

ಸದ್ಯ ವಿಧಾನ ಪರಿಷತ್ ಸಭಾಪತಿ ಆಗಿರುವ ಹೊರಟ್ಟಿ ಅವರು, ಪರಿಷತ್ ಪ್ರವೇಶಿಸಿ 43 ವರ್ಷ 201 ದಿನಗಳು ಆಗಿವೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತ 8 ಬಾರಿ ಆಯ್ಕೆ ಆಗಿರುವ ಅವರು ಸಚಿವರಾಗಿ, ಮೂರು ಬಾರಿ ಸಭಾಪತಿ ಆಗಿಯೂ ಕಾರ್ಯನಿರ್ವಹಿಸಿದ್ದಾರೆ.

2022ರಲ್ಲಿ ಅವರ ಹೆಸರು ಲಂಡನ್ನಿನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿತ್ತು ಎಂದು ಪ್ರಕಟಣೆ ತಿಳಿಸಿದೆ.

ದೀರ್ಘಾವಧಿ ಮುಖ್ಯಮಂತ್ರಿಗಳು: 24 ವರ್ಷ 165 ದಿನ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಸಿಕ್ಕಿಂ ರಾಜ್ಯದ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಅವರ ಹೆಸರೂ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ. 23 ವರ್ಷ 137 ದಿನ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆಗಿದ್ದ ಜ್ಯೋತಿ ಬಸು ಅವರೂ ಈ ಪುಸ್ತಕದಲ್ಲಿ ಸ್ಥಾನ ಪಡೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT