ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಸಿಎ ಮೊದಲ ಡಿವಿಷನ್‌ ಕ್ರಿಕೆಟ್‌ ಟೂರ್ನಿ ಎಚ್‌ಎಸ್‌ಸಿ ‘ಎ’ ತಂಡಕ್ಕೆ ಗೆಲುವು

Last Updated 30 ನವೆಂಬರ್ 2021, 15:17 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಚುರುಕಿನ ಬೌಲಿಂಗ್ ಮಾಡಿದ ಹುಬ್ಬಳ್ಳಿ ಸ್ಪೋರ್ಟ್ಸ್ ಕ್ಲಬ್‌ ‘ಎ’ (ಎಚ್‌ಎಸ್‌ಸಿ) ‌ತಂಡ, ಕೆಎಸ್‌ಸಿಎ ಧಾರವಾಡ ವಲಯದ ಮೊದಲ ಡಿವಿಷನ್‌ ಕ್ರಿಕೆಟ್‌ ಟೂರ್ನಿಯ ಮಂಗಳವಾರದ ಪಂದ್ಯದಲ್ಲಿ 73 ರನ್‌ಗಳ ಗೆಲುವು ಸಾಧಿಸಿ ನಾಲ್ಕು ಅಂಕಗಳನ್ನು ಸಂಪಾದಿಸಿತು.

ಇಲ್ಲಿನ ಆರ್‌ಐಎಸ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಎಚ್‌ಎಸ್‌ಸಿ 49.3 ಓವರ್‌ಗಳಲ್ಲಿ 270 ರನ್‌ ಗಳಿಸಿತು. ಆಕಾಶ ಪತ್ತಾರ (78) ಉತ್ತಮ ಬ್ಯಾಟಿಂಗ್‌ ಇದಕ್ಕೆ ಕಾರಣವಾಯಿತು. ಎದುರಾಳಿ ಧಾರವಾಡದ ಕ್ರಿಕೆಟ್‌ ಕ್ಲಬ್‌ ಆಫ್‌ ಕರ್ನಾಟಕ ‘ಎ’ ತಂಡ 42 ಓವರ್‌ಗಳಲ್ಲಿ 197 ರನ್‌ ಕಲೆಹಾಕಿ ಆಲೌಟ್‌ ಆಯಿತು.

ಕರ್ನಾಟಕ ಜಿಮ್ಖಾನಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬೆಳಗಾವಿಯ ಅಮೃತ ಪೋತದಾರ ತಂಡ ಸ್ವಪ್ನಿಲ್‌ ಎಳವೆ (116) ಶತಕ ಮತ್ತು ತುಷಾರ ಸಿಂಗ್‌ (94) ಉತ್ತಮ ಬ್ಯಾಟಿಂಗ್‌ ನೆರವಿನಿಂದ 46.3 ಓವರ್‌ಗಳಲ್ಲಿ 406 ರನ್‌ ಕಲೆಹಾಕಿತು. ಎದುರಾಳಿ ಎಸ್‌ಡಿಎಂ ಕ್ರಿಕೆಟ್‌ ಅಕಾಡೆಮಿ ‘ಬಿ’ ತಂಡ 43.3 ಓವರ್‌ಗಳಲ್ಲಿ 186 ರನ್‌ ಗಳಿಸಿ ತನ್ನ ಹೋರಾಟ ಮುಗಿಸಿತು.

ಬಿಜಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬಿಡಿಕೆ ಸ್ಪೋರ್ಟ್ಸ್ ಫೌಂಡೇಷನ್‌ ‘ಎ’ ತಂಡ 117 ರನ್‌ಗಳ ಗೆಲುವು ಪಡೆಯಿತು. ಈ ತಂಡ ನೀಡಿದ್ದ 270 ರನ್‌ಗಳ ಗುರಿ ಎದುರು ಪರದಾಡಿದ ಬೆಳಗಾವಿ ಸ್ಪೋರ್ಟ್ಸ್‌ ಕ್ಲಬ್‌ ‘ಬಿ’ ತಂಡ 152 ರನ್ ಗಳಿಸಿ ಆಲೌಟ್ ಆಯಿತು. ಹಾರ್ದಿಕ್‌ ಓಜಾ ನಾಲ್ಕು ವಿಕೆಟ್ ಪಡೆದು ಮಿಂಚಿದರು.

ರಾಜನಗರದ ಕೆಎಸ್‌ಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬೆಳಗಾವಿ ಸ್ಪೋರ್ಟ್ಸ್‌ ಕ್ಲಬ್‌ ‘ಎ’ ತಂಡ ಏಳು ವಿಕೆಟ್‌ಗಳ ಗೆಲುವು ತನ್ನದಾಗಿಸಿಕೊಂಡಿತು. ಮೊದಲು ಬ್ಯಾಟ್‌ ಮಾಡಿದ ಎಚ್‌ಎಸ್‌ಸಿ ‘ಬಿ’ ತಂಡ 35.5 ಓವರ್‌ಗಳಲ್ಲಿ 130 ರನ್‌ ಗಳಿಸಿತ್ತು. ಈ ಗುರಿಯನ್ನು ಕುಂದಾನಗರಿಯ ತಂಡ 13.1 ಓವರ್‌ಗಳಲ್ಲಿ ತಲುಪಿತು. ಬೆಳಗಾವಿ ತಂಡದ ಅಮರ್‌ ಘಾಲೆ ಐದು ವಿಕೆಟ್‌ ಉರುಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT