ಹುಬ್ಬಳ್ಳಿ: ‘ರಾಜ್ಯದಲ್ಲಿ ಅಹಿಂದ ಚಳವಳಿಯು 25 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಗರದ ರಾಯಲ್ ರಿಟ್ಜ್ ಹೋಟೆಲ್ ಆವರಣದಲ್ಲಿ ಏ. 26ರಂದು ಬೆಳಿಗ್ಗೆ 10 ಗಂಟೆಯಿಂದ ರಾಜ್ಯಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ’ ಎಂದು ವಿವಿಧ ದಲಿತ ಸಂಘ– ಸಂಸ್ಥೆಗಳ ಮಹಾಮಂಡಳದ ದಾನಪ್ಪ ಕಬ್ಬೇರ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಹಿಂದ 25: ಹೋರಾಟ, ಸಾಧನೆ, ಸಂಕಲ್ಪ’ ಎಂಬ ಶೀರ್ಷಿಕೆ ಅಡಿಯಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಅಹಿಂದ ಚಳವಳಿ ನಮ್ಮ ಸಮುದಾಯಗಳಿಗೆ ಸಾಕಷ್ಟು ಶಕ್ತಿ ನೀಡುತ್ತ ಬಂದಿದೆ. ಈ ಚಳವಳಿಯ ಹೋರಾಟ, ಸಾಧನೆಯ ಅವಲೋಕನ ಮಾಡಬೇಕಿದೆ. ಹೊಸ ಸವಾಲು ಎದುರಿಸಲು ಸಂಕಲ್ಪ ಮಾಡಬೇಕಿದೆ. ನಮ್ಮ ಸಮುದಾಯಗಳ ಏಕತೆಯನ್ನು ಮತ್ತಷ್ಟು ಬಲಗೊಳಿಸಬೇಕಿದೆ’ ಎಂದು ಕರೆ ನೀಡಿದರು.

ಸಮತಾ ಸೇನಾದ ಗುರುನಾಥ ಉಳ್ಳಿಕಾಶಿ ಮಾತನಾಡಿ, ‘ಸಚಿವರಾದ ಸತೀಶ ಜಾರಕಿಹೊಳಿ, ಸಂತೋಷ ಲಾಡ್, ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಅವರು ಪಾಲ್ಗೊಳ್ಳುವರು. ನಿವೃತ್ತ ನ್ಯಾ.ಎಚ್.ಎನ್. ನಾಗಮೋಹನದಾಸ್, ಚಿಂತಕ ರವಿವರ್ಮ ಕುಮಾರ್ ಮಾತನಾಡುವರು. ಒಂದೂವರೆ ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.

ಚಂದ್ರಶೇಖರ ಜುಟ್ಟಲ್, ಅನ್ವರ ಮುಧೋಳ, ಬಿ.ಕೆ. ನೀರಲಗಟ್ಟಿ, ಶಿವಾನಂದ ಮುತ್ತಣ್ಣವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-24-657801476

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.