ಹುಬ್ಬಳ್ಳಿ: ಜಾಗತಿಕ ಲಿಂಗಾಯತ ಮಹಾಸಭಾ, ಬಸವಕೇಂದ್ರ ಮಹಿಳಾ ಘಟಕ, ಬಸವಪರ ಸಂಘಟನೆಗಳ ಸಹಯೋಗದಲ್ಲಿ ನಗರದ ತೋಳನಕೆರೆ ವೃತ್ತದಲ್ಲಿ ಏ. 5ರಂದು ಅಕ್ಕಮಹಾದೇವಿ ಜಯಂತಿ ಹಾಗೂ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಸಂಜೆ 4ಕ್ಕೆ ವಿದ್ಯಾನಗರದ ಮಹಾನಗರ ಪಾಲಿಕೆ ಉದ್ಯಾನದಿಂದ ಶಿರೂರ ಪಾರ್ಕ್ ಮಾರ್ಗವಾಗಿ ಮೆರವಣಿಗೆ ನಡೆಯಲಿದೆ. ಸಂಜೆ 5.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಮಹೇಶ ಟೆಂಗಿನಕಾಯಿ ಉದ್ಘಾಟಿಸುವರು. ಹು–ಧಾ ಮಹಾನಗರ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ ಅಧ್ಯಕ್ಷತೆ ವಹಿಸುವರು. ಸಾಹಿತಿ, ಹೃದ್ರೋಗ ತಜ್ಞೆ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ, ಪಾಲಿಕೆ ಸದಸ್ಯೆ ವೀಣಾ ಬರದ್ವಾಡ ಅತಿಥಿಗಳಾಗಿ ಭಾಗವಹಿಸುವರು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವಿ. ಗೊಂಗಡಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-24-1345920810

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.