ಹುಬ್ಬಳ್ಳಿ: ‘ಚಿತ್ರದುರ್ಗ ನಗರದಲ್ಲಿ ಮೇ 9ರಂದು ನಡೆಯುವ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕು’ ಎಂದು ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಹೇಳಿದರು.

ಇಲ್ಲಿನ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ‘ಬಿಎಸ್ವೈ ಅಭಿಮಾನೋತ್ಸವ’ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಇಲ್ಲಿನ ಈದ್ಗಾ ಮೈದಾನದಿಂದ ಹೋರಾಟ ಆರಂಭಿಸಿದ ರಾಜ್ಯದ ಅನೇಕ ನಾಯಕರು ಇಂದು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ದೊಡ್ಡ ರಾಜಕಾರಣಿಗಳಾಗಿದ್ದಾರೆ. ಅವರಲ್ಲಿ ಬಿ.ಎಸ್.ಯಡಿಯೂರಪ್ಪ ಅವರೂ ಒಬ್ಬರು’ ಎಂದರು.

‘ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಾದ್ಯಂತ ಸೈಕಲ್ ಮೇಲೆ ಸಂಚರಿಸಿ ಪಕ್ಷ ಬೆಳೆಸಿದರು. ಸಾಮಾನ್ಯ ವ್ಯಕ್ತಿಯಾಗಿ ಬೆಳೆದು ರಾಜ್ಯದ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದರು. ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ವಿಭಾಗೀಯ ಪ್ರಭಾರಿ ಜಯತೀರ್ಥ ಕಟ್ಟಿ ಅವರು, ‘ಮಂಡ್ಯದ ಬೂಕನಕೆರೆಯ ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿ, ಶಿಕಾರಿಪುರವನ್ನು ತಮ್ಮ ಕರ್ಮಭೂಮಿಯನ್ನಾಗಿಸಿಕೊಂಡು, ಯಡಿಯೂರಪ್ಪ ಅವರು 50 ವರ್ಷ ಸುದೀರ್ಘ ಮತ್ತು ಸಕ್ರಿಯ ರಾಜಕೀಯ ಜೀವನ ನಡೆಸಿದ್ದಾರೆ. ಈ ಸಾಧನೆಯನ್ನು ನಾವೆಲ್ಲರೂ ಗೌರವಿಸಬೇಕಿದೆ’ ಎಂದರು.

‘ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಭಾಗ್ಯಲಕ್ಷ್ಮಿ ಬಾಂಡ್, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತವಾಗಿ ಸೈಕಲ್ ವಿತರಣೆಯಂತಹ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಜನತೆಯ ಮನೆ ಮಾತಾಗಿದ್ದಾರೆ’ ಎಂದು ಬಣ್ಣಿಸಿದರು.

ಹು–ಧಾ ಮಹಾನಗರ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವ್ಹಾಣ, ಪಕ್ಷದ ಮುಖಂಡರಾದ ವಸಂತ ನಾಡಜೋಶಿ, ಶಿವು ಮೆಣಸಿನಕಾಯಿ, ಮಂಜುನಾಥ ಕಾಟಕರ, ಸತೀಶ ಶೇಜವಾಡಕರ, ಮಣಿಕಂಠ ಶಾಗೋಟಿ ಹಾಗೂ ಪ್ರಮುಖರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-24-1255014696

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.