ಹುಬ್ಬಳ್ಳಿ: ಕೂಲಿ ಕೆಲಸದ ನೆಪದಲ್ಲಿ ಬಾಂಗ್ಲಾ ನುಸುಳುಕೋರರು ಹುಬ್ಬಳ್ಳಿ ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಅಕ್ರಮವಾಗಿ ವಾಸವಾಗಿದ್ದು, ತಕ್ಷಣ ಅವರನ್ನು ವಿಚಾರಣೆಗೆ ಒಳಪಡಿಸಿ ಗಡೀಪಾರು ಮಾಡಬೇಕು ಎಂದು ಹುಬ್ಬಳ್ಳಿ –ಧಾರವಾಡ ಮಹಾನಗರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಆಗ್ರಹಿಸಿದರು.

ನಗರದ ದುರ್ಗದ ಬೈಲ್ ಬಳಿಯ ಶಹರ ಪೊಲೀಸ್ ಠಾಣೆ ಎದುರು ಬುಧವಾರ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ ವಿರುದ್ಧ ಘೋಷಣೆ ಕೂಗಿದರು. ರಾಜ್ಯ ಸರ್ಕಾರದಿಂದ ಮುಸ್ಲಿಂ ತುಷ್ಟೀಕರಣ ಹೆಚ್ಚಾಗುತ್ತಿದೆ. ದೇಶದ ಭದ್ರತೆಗೆ ಸಂಕಷ್ಟ ಎದುರಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪ್ರೀತಂ ಅರಕೇರಿ ಮಾತನಾಡಿ, ‘ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ನಿಂದಾಗಿ 90 ಲಕ್ಷ ಮಂದಿ ಪೌರತ್ವ ಕಳೆದುಕೊಂಡಿದ್ದಾರೆ. ಅವರಲ್ಲಿ ಬಹುತೇಕರು ಬಾಂಗ್ಲಾ ನುಸುಳುಕೋರರಾಗಿದ್ದು, ಅಲ್ಲಿ ವಾಸಿಸಲು ಅವಕಾಶವಿಲ್ಲದ ಕಾರಣ ದೇಶದ ವಿವಿಧೆಡೆ ವಲಸೆ ಹೋಗುತ್ತಿದ್ದಾರೆ. ರೈಲ್ವೆ ಪೊಲೀಸ್ ಹಾಗೂ ರಾಜ್ಯ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುತ್ತಿಲ್ಲ’ ಎಂದು ದೂರಿದರು.

‘ಬಾಂಗ್ಲಾ ನುಸುಳುಕೋರರ ಬಗ್ಗೆ ಮಾಹಿತಿಯಿದ್ದರೂ ರಾಜ್ಯ ಸರ್ಕಾರ ಮೌನವಾಗಿದೆ. ದೇಶದ ಭದ್ರತೆ ವಿಷಯದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ’ ಎಂದು ಬಿಜೆಪಿ ಧಾರವಾಡ ವಿಭಾಗದ ಪ್ರಭಾರಿ ಜಯತೀರ್ಥ ಕಟ್ಟಿ ಕಿಡಿಕಾರಿದರು.

ಮುಖಂಡ ರಾದ ನಾರಾಯಣ ಜರತಾಘರ, ಶಿವು ಮೆಣಸಿನಕಾಯಿ, ಪ್ರಭು ನವಲಗುಂದಮಠ, ಪ್ರವೀಣ ಕುಬಸದ, ಜಗದೀಶ ಬುಳ್ಳನವರ, ಹರೀಶ ಹಳ್ಳಿಕೇರಿ, ಹರೀಶ ಸರ್ವಳೆ, ನಾಗರತ್ನಾ ಬಳ್ಳಾರಿ, ಅಣ್ಣಪ್ಪ ಗೋಕಾಕ, ಮಾರುತಿ ಚಾಕಲಬ್ಬಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-24-734961640

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.