ಗುರುವಾರ , ಜೂಲೈ 9, 2020
21 °C

ಹುಬ್ಬಳ್ಳಿ: ಉಪಾಹಾರದಲ್ಲಿ ಬಾಲಹುಳು; ಇಂದೇ ವರದಿ ನೀಡಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಮಹಾನಗರ ಪಾಲಿಕೆ ಪೌರಕಾರ್ಮಿಕರಿಗೆ ಶನಿವಾರ ಬೆಳಿಗ್ಗೆ ನೀಡಿದ ಉಪಾಹಾರದಲ್ಲಿ ಬಾಲಹುಳುಗಳು ಕಂಡು ಬಂದಿದ್ದು, ಈ ಕುರಿತು ಇಂದೇ (ಶನಿವಾರ) ಸಮಗ್ರವಾದ ವರದಿ ನೀಡಬೇಕು ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗವು ಪಾಲಿಕೆ ಆಯುಕ್ತರಿಗೆ ಪತ್ರ ಬರೆದಿದೆ.

ಪೌರ ಕಾರ್ಮಿಕರಿಗೆ ಆಹಾರ ನೀಡುವ ಮೊದಲು ಪಾಲಿಕೆ ಅಧಿಕಾರಿಗಳು ಹಾಗೂ ಗುತ್ತಿಗೆ ಪಡೆದ ಕಂಪನಿ ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕಿತ್ತು. ಈ ಪ್ರಕರಣವನ್ನು ಆಯುಕ್ತರು ಗಂಭೀರವಾಗಿ ಪರಿಗಣಿಸಬೇಕು, ಮುಂದಿನ ದಿನಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು