ಹುಬ್ಬಳ್ಳಿಯ ಉಣಕಲ್‌ನಲ್ಲಿರುವ ಮಂದಮತಿ ಮಹಿಳೆಯರ ಅನುಪಾಲನಾ ಗೃಹದ ಕೊಠಡಿ ಶಿಥಿಲವಾಗಿರುವುದು
ಹುಬ್ಬಳ್ಳಿಯ ಉಣಕಲ್‌ನಲ್ಲಿರುವ ಮಂದಮತಿ ಮಹಿಳೆಯರ ಅನುಪಾಲನಾ ಗೃಹದ ಕೊಠಡಿ ಶಿಥಿಲವಾಗಿರುವುದು
ಸುಮಾರು 60 ವರ್ಷಗಳ ಹಳೆಯ ಕಟ್ಟಡವಾಗಿದ್ದು ಶಿಥಿಲವಾಗಿದೆ. ಕಟ್ಟಡದ ದುರಸ್ತಿಯ ಯೋಜನಾ ಅನುದಾನ ನಿಗದಿಯಾಗಿದೆ. ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದು ದುರಸ್ತಿ ಮಾಡಿಸಲಾಗುವುದು
ಸವಿತಾ ಕಾಳೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ
ಮನೋವಿಕಲ ಬಾಲಕಿಯರ ಬಾಲ ಮಂದಿರದ ಅಡುಗೆ ಮನೆ ಊಟದ ಹಾಲ್ ದುರಸ್ತಿ ಹೊಸದಾಗಿ ವಿದ್ಯುತ್ ಸಂಪರ್ಕ ನೀರಿನ ಟ್ಯಾಂಕ್ ಅಳವಡಿಕೆ ಸೇರಿ ಕೆಲ ಕಾಮಗಾರಿಗಳನ್ನು ₹10 ಲಕ್ಷ ವೆಚ್ಚದಲ್ಲಿ ಮಾಡಲಾಗಿದೆ. ಇನ್ನೂ ದುರಸ್ತಿ ಆಗಬೇಕಿದೆ.
ರೇಣುಕಾ ಅಧೀಕ್ಷಕಿ ಮನೋವಿಕಲ ಬಾಲಕಿಯರ ಬಾಲ ಮಂದಿರ
ಕಟ್ಟಡವು ತುಂಬಾ ಹಳೆಯದಾಗಿದ್ದು ಶಿಥಿಲವಾಗಿರುವ ಭಾಗದ ದುರಸ್ತಿ ಕಾರ್ಯವನ್ನು ಶೀಘ್ರದಲ್ಲಿಯೇ ಮಾಡಿಸಲಾಗುವುದು
ಚೆನ್ನಮ್ಮ ಅಧೀಕ್ಷಕಿ ಮಂದಮತಿ ಮಹಿಳೆಯರ ಅನುಪಾಲನಾ ಗೃಹ
₹41 ಲಕ್ಷ ಅನುದಾನ ಬಿಡುಗಡೆ
‘ಮಂದಮತಿ ಮಹಿಳೆಯರ ಅನುಪಾಲನಾ ಗೃಹ ಕಟ್ಟಡದ ದುರಸ್ತಿಗೆ ಜಿಲ್ಲಾ ಪಂಚಾಯಿತಿಯಿಂದ ₹41 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಅದರಲ್ಲಿ ಆದ್ಯತೆ ಮೇರೆಗೆ ತುರ್ತು ಕಾಮಗಾರಿ ಕೈಗೊಳ್ಳಬೇಕು. ಇನ್ನೂ ಹೆಚ್ಚಿನ ಅನುದಾನದ ಅವಶ್ಯವಿದ್ದಲ್ಲಿ ಕ್ರಿಯಾಯೋಜನೆ ವರದಿ ಸಲ್ಲಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು.