ಹುಬ್ಬಳ್ಳಿ: ‘ಕೇಂದ್ರ ಸರ್ಕಾರವು ಭ್ರಷ್ಟಾಚಾರ ರಹಿತ ಪಾರದರ್ಶಕ ನೇಮಕಾತಿಗೆ ಆದ್ಯತೆ ನೀಡುತ್ತಿದೆ. ರೋಜಗಾರ್ ಮೇಳದಲ್ಲಿ ಉದ್ಯೋಗ ಪ್ರಮಾಣ ಪತ್ರ ಪಡೆದವರು ಸಾರ್ವಜನಿಕರ ಸೇವೆಗೆ ಬದುಕನ್ನು ಮುಡಿಪಾಗಿಡಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಇಲ್ಲಿನ ಕೇಶ್ವಾಪುರದ ರೈಲ್ವೆ ಆಫೀಸರ್ಸ್ ಕ್ಲಬ್ನಲ್ಲಿ ಶನಿವಾರ ನಡೆದ 19ನೇ ರೋಜಗಾರ್ ಮೇಳ ಉದ್ಘಾಟಿಸಿ, ಅಭ್ಯರ್ಥಿಗಳಿಗೆ ಉದ್ಯೋಗ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

‘ಮಾಡುವ ಕಾರ್ಯದಲ್ಲಿ ಪ್ರಾಮಾಣಿಕತೆ, ನಿಷ್ಠೆ ಇದ್ದರೆ ಬದುಕಿಗೂ ಗೌರವ ಸಿಗುತ್ತದೆ. ಸಾರ್ವಜನಿಕರ ಸೇವೆಗೆ ದೊರೆತ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ಸಮರ್ಪಣಾಭಾವದಿಂದ ಕಾರ್ಯನಿರ್ವಹಿಸಬೇಕು’ ಎಂದರು.

‘ಕೇಂದ್ರ ಸರ್ಕಾರದ ಅಧೀನದಲ್ಲಿರುವ ಎಲ್ಲ ಇಲಾಖೆಗಳಲ್ಲೂ ನೇಮಕಾತಿ ನಡೆಯುತ್ತಿದೆ. ಅನಗತ್ಯ ಹುದ್ದೆಯನ್ನು ತೆಗೆದು, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇಂದು ದೇಶದಾದ್ಯಂತ 51 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಾಗಿದೆ’ ಎಂದರು.

‘ಭಾರತೀಯ ರೈಲ್ವೆ ವಿಶ್ವ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಶೇ 99ರಷ್ಟು ಮಾರ್ಗಗಳು ವಿದ್ಯುದೀಕರಣವಾಗಿದೆ. ಇಂಧನದ ಮೇಲಿನ ಅವಲಂಬನೆ ಕಡಿಮೆಯಾಗಿದೆ. ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿಯೂ ಪ್ರಗತಿ ಸಾಧಿಸಲಾಗಿದೆ’ ಎಂದು ಹೇಳಿದರು.

ಅಭ್ಯರ್ಥಿ ಅವನೀಶ ಕುಮಾರ, ‘ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯುವುದು ನನ್ನ ಕನಸಾಗಿತ್ತು. ನಿರಂತರ ಪರಿಶ್ರಮ ಹಾಗೂ ಅಧ್ಯಯನದಿಂದ ರೈಲ್ವೆ ಪರೀಕ್ಷೆಯಲ್ಲಿ ಉತ್ತೀರ್ಣನಾಗಿ, ಉದ್ಯೋಗಿಯಾಗಿದ್ದೇನೆ’ ಎಂದರು. ರೈಲ್ವೆ, ಬ್ಯಾಂಕ್, ಅಂಚೆ ಇಲಾಖೆ, ಕೇಂದ್ರೀಯ ವಿದ್ಯಾಲಯ ಸೇರಿದಂತೆ ಏಳು ಇಲಾಖೆಗಳ 150 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಪಿ. ಅನಂತ್, ಪ್ರಧಾನ ಹಿರಿಯ ಸಿಬ್ಬಂದಿ ಅಧಿಕಾರಿ ಸೂರ್ಯಪ್ರಕಾಶ, ಹುಬ್ಬಳ್ಳಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಬೇಲಾ ಮೀನಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-24-1151632964

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.