ಬಿಗಿ ಭದ್ರತೆ; ಖಡಕ್ ಎಚ್ಚರಿಕೆ
ಹೋಳಿ ಹುಣ್ಣಿಗೆ ಹಾಗೂ ರಂಗಪಂಚಮಿ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ ಬಿಗಿ ಬಂದೋಬಸ್ತ್ ಮಾಡಿಕೊಂಡಿದೆ. ಹಳೇ ಹುಬ್ಬಳ್ಳಿ ಹಾಗೂ ಧಾರ್ಮಿಕ ಕಟ್ಟಡಗಳ ಸುತ್ತಮಮುತ್ತ ಕಾಮಣ್ಣ ಮೂರ್ತಿ ಪ್ರತಿಷ್ಠಾಪಿಸುವ ಕಡೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಿ.ಸಿ ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ರೌಡಿಗಳನ್ನು ಕರೆಸಿ ಮುಚ್ಚಳಿಕೆ ಪತ್ರ ಬರೆಸಿಕೊಂಡಿದ್ದು ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.