ನನ್ನ ಅನುಭವ ಹಿರಿತನವನ್ನು ವರಿಷ್ಠರು ಪರಿಗಣಿಸಲಿದ್ದಾರೆ. ಟಿಕೆಟ್‌ಗಾಗಿ ನನ್ನ ಹಾಗೂ ಎಸ್.ವಿ.ಸಂಕನೂರ ನಡುವೆ ಮಾತ್ರ ಪೈಪೋಟಿ ಇದೆ
ಲಿಂಗರಾಜ ಪಾಟೀಲ ಅಧ್ಯಕ್ಷ ಬಿಜೆಪಿ ರಾಜ್ಯ ಶಿಸ್ತು ಸಮಿತಿ
ನಾನು ಟಿಕೆಟ್ ಆಕಾಂಕ್ಷಿ
ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು ಬಿಜೆಪಿಯಿಂದ ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಕಳೆದ 36 ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇನೆ. ವರಿಷ್ಠರು ನನಗೆ ಟಿಕೆಟ್ ನೀಡುವ ವಿಶ್ವಾಸ ಇದೆ’ ಎಂದು ಲಿಂಗರಾಜ ಪಾಟೀಲ ಹೇಳಿದರು. ಕ್ಷೇತ್ರ ವ್ಯಾಪ್ತಿಯ ನಾಲ್ಕೂ ಜಿಲ್ಲೆಗಳಲ್ಲಿ ಈಗಾಗಲೇ ಒಂದನೇ ಹಂತದ ಮತದಾರರ ನೋಂದಣಿ ಪ್ರಕ್ರಿಯೆ ಮುಗಿದಿದೆ. ಎರಡನೇ ಹಂತದ ನೋಂದಣಿ ನ.25ರಂದು ಆರಂಭವಾಗಿದ್ದು ಡಿ.10ರವರೆಗೆ ನಡೆಯಲಿದೆ. ಎಲ್ಲ ಪದವೀಧರರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಬೇಕು ಎಂದರು. ಬಿಜೆಪಿ ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಜಿಲ್ಲಾ ಯುವ ಮೋರ್ಚಾ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಧಾರವಾಡ ವಿಭಾಗದ ಸಹ ಪ್ರಭಾರಿ ಸೇರಿ ವಿವಿಧ ಪಕ್ಷ ನೀಡಿದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದೇನೆ. ಸದ್ಯ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷನಾಗಿದ್ದೇನೆ ಎಂದು ಹೇಳಿದರು.