ಹುಬ್ಬಳ್ಳಿ: ಮದ್ಯದ ಅಮಲಿನಲ್ಲಿ ಪ್ರದೀಪ ಪೂಜಾರ ಎಂಬಾತ ತನ್ನ ಅಣ್ಣನೊಂದಿಗೆ ವಾಗ್ವಾದ ಮಾಡಿ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ ಪ್ರಕರಣ ಇಲ್ಲಿನ ಶಿವಶಂಕರ ಕಾಲೊನಿಯಲ್ಲಿ ಗುರುವಾರ ನಡೆದಿದೆ.

ಮಲ್ಲೇಶ ಪೂಜಾರ (42) ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಪ್ರದೀಪ ಪೂಜಾರ ಪರಾರಿಯಾಗಿದ್ದಾನೆ. ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು: ತಾಲ್ಲೂಕಿನ ಕಿರೆಸೂರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಗುರುವಾರ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಕೆಲೂರ ಗ್ರಾಮದ ಶರಿಸಾಬ್ ಸಿಮಿಕೇರಿ (36) ಮೃತ ಬೈಕ್ ಸವಾರ. ಬೈಕ್ನ ಹಿಂಬದಿ ಸವಾರ, ಅದೇ ಗ್ರಾಮದ ದುರುಗೇಶ ವಡ್ಡರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಕೆಎಂಸಿಆರ್ಐ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಜಗಳಲ; ಹಲ್ಲೆ: ಇಲ್ಲಿನ ಗುರುದೇವ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಮದನ ಜೆ. ಅವರ ಮೇಲೆ ವಿಲ್ಸನ್ ಗಾಯಕವಾಡ ಕಲ್ಲಿನಿಂದ ಹಲ್ಲೆ ನಡೆಸಿದ್ದು, ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದನ ಅವರು ಮನೆ ಎದುರು ನಾಯಿ ಹಿಡಿದುಕೊಂಡು ನಿಂತಿದ್ದರು. ಈ ವೇಳೆ ವೈಷ್ಣವಿ ಗಾಯಕವಾಡ ಅವರ ನಾಯಿ ಮದನ ಅವರಿಗೆ ಕಚ್ಚಲು ಮುಂದಾಗಿದೆ. ಈ ವೇಳೆ ಇಬ್ಬರ ನಡುವೆ ಜಗಳ ನಡೆದಿದ್ದು, ವಿಲ್ಸನ್ ಮಧ್ಯಪ್ರವೇಶಿಸಿ ಮದನ ಅವರಿಗೆ ಅವಾಚ್ಯವಾಗಿ ನಿಂದಿಸಿ, ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.