ಹುಬ್ಬಳ್ಳಿ: ಖಾಸಗಿ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ನಂಬಿಸಿ, ನಗರದ ಶ್ರೀಕಾಂತ ಮೆಹರವಾಡೆ ಅವರಿಗೆ ₹11 ಲಕ್ಷ ವಂಚಿಸಿದ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀಕಾಂತ ಅವರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ಹೈದರಾಬಾದ್ ಮೂಲದ ಎ.ವಿ. ಇನ್ವೆಸ್ಟ್ಮೆಂಟ್ ಸಲೂಷನ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಶೇ 6ರಷ್ಟು ಲಾಭಾಂಶ ನೀಡುವುದಾಗಿ ಹೇಳಿದ್ದಾನೆ. ನಂತರ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

₹6 ಲಕ್ಷ ವಂಚನೆ: ಲಾಭದ ಆಮಿಷವೊಡ್ಡಿ ನಗರದ ಲಕ್ಷ್ಮಿಕಾಂತ ಜಾಧವ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ₹6 ಲಕ್ಷ ವಂಚಿಸಿದ್ದಾನೆ.

‘ಆ್ಯಪ್ವೊಂದರಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆ, ಜೀವ ಬೆದರಿಕೆ: ಹಳೇ ಹುಬ್ಬಳ್ಳಿಯ ನೇಕಾರ ನಗರದ ನೇತಾಜಿ ಕಾಲೊನಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಇಬ್ಬರು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಕುರಿತು ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮಾರುತಿ ಗಾಯಕವಾಡ ಅವರ ಮೇಲೆ ದೀಪಕ್ ಹಾಗೂ ಪ್ರಜ್ವಲ್ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ. ಮಾರುತಿ ಅವರ ಮನೆಯ ಮುಂದೆ ನಿಲ್ಲಿಸಿದ್ದ ಕಾರಿಗೆ ದೀಪಕ್ ಹಾಗೂ ಪ್ರಜ್ವಲ್ ಕಲ್ಲು ಎಸೆದಿದ್ದಾರೆ. ಅದನ್ನು ಪ್ರಶ್ನಿಸಿದ ಮಾರುತಿಗೆ ಚಾಕುವಿನಿಂದ ಇರಿಯಲು ಮುಂದಾಗಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

₹2 ಲಕ್ಷ ವಂಚನೆ: ಒಂದು ಐಫೋನ್ ಖರೀದಿಸಿದರೆ ಮತ್ತೊಂದನ್ನು ಉಚಿತವಾಗಿ ನೀಡುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ನಗರದ ನಿತಿಶಾ ಜೈನ್ ಅವರಿಂದ ₹2.20 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ ಬಗ್ಗೆ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.