ಹುಬ್ಬಳ್ಳಿ: ಇಲ್ಲಿನ ದೇಸಾಯಿ ವೃತ್ತದಲ್ಲಿ ಪೈಪ್ ಒಡೆದು ಕುಡಿಯುವ ನೀರು ಪೋಲಾಗುತ್ತಿದ್ದು, ಶಾಸಕ ಮಹೇಶ ಟೆಂಗಿನಕಾಯಿ ಅವರು ಪೈಪ್ಲೈನ್ ದುರಸ್ತಿ ಕಾಮಗಾರಿಯನ್ನು ಸೋಮವಾರ ವೀಕ್ಷಿಸಿದರು.

ಕಳೆದ ಏಳೆಂಟು ತಿಂಗಳಿಂದ ಪೈಪ್ ಒಡೆದು ನೀರು ಪೋಲಾಗುತ್ತಿತ್ತು. ಇದನ್ನು ಸಾರ್ವಜನಿಕರು ಅಧಿಕಾರಗಳ ಗಮನಕ್ಕೆ ತಂದರೂ ದುರಸ್ತಿ ಮಾಡಿರಲಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಮಹೇಶ ಟೆಂಗಿನಕಾಯಿ, ಪೈಪ್ ದುರಸ್ತಿ ಮಾಡದೆ ನಿರ್ಲಕ್ಷ್ಯ ವಹಿಸಿದ ಎಲ್ ಆ್ಯಂಡ್ ಟಿ ಕಂಪನಿಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

‘ಇದು ಮುಖ್ಯರಸ್ತೆ ಆಗಿರುವುದರಿಂದ ಪ್ರತಿನಿತ್ಯ ಸಾವಿರಾರು ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತವೆ. ಪೈಪ್ ದುರಸ್ತಿಗೆ ರಸ್ತೆ ಅಗೆದಿರುವುದರಿಂದ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದ್ದು, ದಟ್ಟಣೆ ಉಂಟಾಗುತ್ತಿದೆ’ ಎಂದು ಟೆಂಗಿನಕಾಯಿ ಹೇಳಿದರು.

‘ಸಾರ್ವಜನಿಕರು, ವಾಹನ ಸವಾರರಿಗೆ ತೊಂದರೆಯಾಗದಂತೆ ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳಬೇಕು, ನೀರು ಪೋಲಾಗುವುದನ್ನು ತಡೆಯಬೇಕು’ ಎಂದು ಸೂಚಿಸಿದರು.

ಪೈಪ್ಲೈನ್ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಅಂಬೇಡ್ಕರ್ ವೃತ್ತದಿಂದ ದೇಸಾಯಿ ವೃತ್ತದವರೆಗೆ ವಾಹನ ಸಂಚಾರ ನಿಷೇಧಿಸಲಾಗಿತ್ತು.

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಸದಸ್ಯೆ ಮೀನಾಕ್ಷಿ ವಂಟಮುರಿ, ಮುಖಂಡರಾದ ರವಿ ನಾಯಕ, ಸಿದ್ದು ಮೊಗಲಿಶೆಟ್ಟರ್, ಎಲ್ ಆ್ಯಂಡ್ ಟಿ ಕಂಪನಿಯ ಚಂದ್ರಶೇಖರ ಮಾಲಿ ಪಾಟೀಲ, ಕಿರಣ ಗಂಜಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-24-298193201

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.