ಹುಬ್ಬಳ್ಳಿ: ‘ಹುಬ್ಬಳ್ಳಿ –ಧಾರವಾಡ ಮಹಾನಗರದ ಪೊಲೀಸರ ಕಾರ್ಯವೈಖರಿ ಕುರಿತು ಆರೋಪಿಸುವಾಗ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು, ಗೃಹ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸ್ಥಳೀಯ ಶಾಸಕರ ಹೆಸರು ಉಲ್ಲೇಖಿಸಿದ್ದು ಖಂಡನೀಯ’ ಎಂದು ಸಮತಾ ಸೇನಾದ ರಾಜ್ಯ ಘಟಕದ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ ಹೇಳಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅರವಿಂದ ಬೆಲ್ಲದ ಅವರು ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಲಂಚದ ವ್ಯವಹಾರ ನಡೆಯುವ ಬಗ್ಗೆ ಆರೋಪಿಸಿದ್ದಾರೆ. ಪೊಲೀಸ್ ಪ್ರಾಧಿಕಾರದ ಬಗ್ಗೆ ಮಾಹಿತಿಯಿಲ್ಲದೆ ಈ ರೀತಿ ಆರೋಪಿಸಿರುವುದು ಸರಿಯಲ್ಲ. ಅಲ್ಲದೆ, ರಾಜ್ಯದಲ್ಲಿ ಪರಿಶಿಷ್ಟ ಸಮುದಾಯದವರು ಗೃಹ ಸಚಿವರಾಗಿರುವ ಕಾರಣಕ್ಕೆ ಅವರು ಈ ರೀತಿ ಆರೋಪ ಮಾಡಿದ್ದಾರೆ’ ಎಂದು ದೂರಿದರು.

‘ಅರವಿಂದ ಬೆಲ್ಲದ ಅವರ ಹೇಳಿಕೆಯು ಪೊಲೀಸ್ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಗ್ಗಿಸುತ್ತದೆ. ಗೃಹ ಸಚಿವರು ಪರಿಶಿಷ್ಟ ಸಮುದಾಯದವರು ಮತ್ತು ರಾಜ್ಯ ಪೊಲೀಸ್ ಮಹಾನಿರ್ದೆಶಕರು ಅಲ್ಪಸಂಖ್ಯಾತ ಸಮುದಾಯದವರು ಎಂಬ ಕಾರಣಕ್ಕೆ ಅವರು ಭ್ರಷ್ಟಾಚಾರದ ಆರೋಪ ಮಾಡಿರುವುದು ಜಾತಿವಾದದ ಪರಮಾವಧಿ’ ಎಂದರು.

ಲೋಹಿತ ಗಾಮನಗಟ್ಟಿ, ಗುರುಸಿದ್ದಪ್ಪ ಅಂಗಡಿ, ಮಂಜುನಾಥ ಸಣ್ಣಕ್ಕಿ, ದೇವೆಂದ್ರಪ್ಪ ಇಟಗಿ, ಬಾಬರ ಖೋಜೆ, ಧನಂಜಯಕುಮಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-24-569138048

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.