ಹುಬ್ಬಳ್ಳಿ: ‘ಬಿಜೆಪಿಯ ಇಲ್ಲಿನ ನಾಯಕರೇ ಮುಖ್ಯಮಂತ್ರಿಗಳು ಆಗಿದ್ದಾರೆ. ಇಲ್ಲಿನವರೇ ಈಗ ಕೇಂದ್ರ ಸಚಿವರಾಗಿದ್ದಾರೆ. ಅವಳಿ ನಗರಗಳ ಅಭಿವೃದ್ಧಿಗೆ ಅವರ ಕೊಡುಗೆ ಏನು’ ಎಂದು ಸಚಿವ ಸಂತೋಷ ಲಾಡ್ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಬರಬೇಕಾದ ಅನುದಾನ, ಕಳಸಾ ಬಂಡೂರಿ ಯೋಜನೆ ಬಗ್ಗೆ ಬಿಜೆಪಿ ಸಂಸದರು ಸಂಸತ್ನಲ್ಲಿ ಮಾತನಾಡುವುದಿಲ್ಲ. ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯಲ್ಲಿ ಹಲವು ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದೆ. ಆದರೂ ಅಭಿವೃದ್ಧಿ ಶೂನ್ಯ. ಈ ಬಗ್ಗೆ ಚರ್ಚೆಗೆ ಸಿದ್ಧ’ ಎಂದರು.

‘ಯಾವುದೇ ದೂರದೃಷ್ಟಿಯಿಲ್ಲದೆ ನಗರದಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಸಲಾಗುತ್ತಿದೆ. ಬಿಆರ್ಟಿಎಸ್ ಯೋಜನೆಯ ಅವ್ಯವಸ್ಥೆ ಬಗ್ಗೆ ಕೇಳಿದರೆ ಬಿಜೆಪಿಯವರು ವೈಯಕ್ತಿಕವಾಗಿ ಟೀಕೆ ಮಾಡುತ್ತಾರೆ. ಪಾಕಿಸ್ತಾನ, ಮುಸ್ಲಿಮರ ಬಗ್ಗೆಯೇ ಹೆಚ್ಚು ಚರ್ಚೆಯಾಗುತ್ತದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಬಿಜೆಪಿಯವರು ಮಾತನಾಡುವುದಿಲ್ಲ. ಪ್ರಧಾನಿ ಪ್ರಚಾರದಲ್ಲಿ ಮಾತ್ರ ಮುಂದೆ ಇದ್ದಾರೆ’ ಎಂದರು.

‘ಸ್ಥಳೀಯ ಮತ್ತು ರಾಜ್ಯಕ್ಕೆ ಸಂಬಂಧಪಟ್ಟ ವಿಷಯದ ಬಗ್ಗೆ ಅಗತ್ಯ ಸಂದರ್ಭಗಳಲ್ಲಿ ಮಾತನಾಡಿದ್ದೇವೆ. ರಾಷ್ಟ್ರಮಟ್ಟದ

ವಿಷಯಗಳ ಬಗ್ಗೆ ಮಾತನಾಡಬಾರದೆಂದು ಹೇಳಲು ಬಿಜೆಪಿಯವರಿಗೆ ಹಕ್ಕು ಇಲ್ಲ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-22-1023362645

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.