ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಬಂಟರ ಸಂಘ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಾರ್ಚ್ 29ರಂದು ಬೆಳಿಗ್ಗೆ 9.30ಕ್ಕೆ ನಗರದ ನವೀನ್ ಹೋಟೆಲ್ನಲ್ಲಿ ‘ಸುವರ್ಣ ಸಂಭ್ರಮ’ ಕಾರ್ಯಕ್ರಮ ಹಮ್ಮಿಕೊಂಡಿದೆ.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿ ಇರಲಿದೆ. ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ್ ಹಾಗೂ ಉದ್ಯಮಿ ಪ್ರಸನ್ನ ಶೆಟ್ಟಿ ಭಾಗವಹಿಸುವರು. ಸಂಘದ ಅಧ್ಯಕ್ಷ ವಿಜಯಾನಂದ ಶೆಟ್ಟಿ ಅಧ್ಯಕ್ಷತೆ ವಹಿಸುವರು.

ಸಂಜೆ 4.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಮಂಗಳೂರು ಸಂಸದ ಬ್ರಿಜೇಶ ಚೌಟ, ಎಂಆರ್ಐ ಗ್ರೂಪ್ ಚೇರ್ಮನ್ ಡಾ.ಕೆ.ಪ್ರಕಾಶ ಶೆಟ್ಟಿ, ಆರ್ಎನ್ಎಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಸತೀಶ ಆರ್.ಎನ್.ಶೆಟ್ಟಿ, ಆಳ್ವಾಸ್ ಪೌಂಡೇಷನ್ ಅಧ್ಯಕ್ಷ ಎಂ.ಮೋಹನ ಆಳ್ವ, ಉದ್ಯಮಿ ಯು.ಬಿ.ಶೆಟ್ಟಿ, ಶಾಸಕರಾದ ರಾಜೇಶ ನಾಯ್ಕ, ಭರತ ಶೆಟ್ಟಿ ವೈ., ಭಾರತಿ ಶೆಟ್ಟಿ, ಹರೀಶ ಪೂಂಜ, ಸುರೇಶ ಗುರ್ಮೆ, ಗುರುರಾಜ ಗಂಟಿಹೊಳೆ ಉಪಸ್ಥಿತರಿರುವರು.

ಸಂಘದ ಸ್ಥಾಪಕ ಸದಸ್ಯರಿಗೆ ಸನ್ಮಾನ, ಕೀರ್ತಿಶೇಷ ಕಟ್ಕೆರೆ ಶಂಕರ ಶೆಟ್ಟಿ ಸ್ಮರಣಾರ್ಥ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಂ. ಮೋಹನ ಆಳ್ವ, ಡಾ.ಕೆ.ಪ್ರಕಾಶ ಶೆಟ್ಟಿ, ಯು. ಸೀತಾರಾಮ ಶೆಟ್ಟಿ ಅವರಿಗೆ ‘ಡಾ.ಆರ್.ಎನ್.ಶೆಟ್ಟಿ ಸ್ಮಾರಕ ಪ್ರಶಸ್ತಿ’ ನೀಡಿ ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-24-899079508

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.