ಹುಬ್ಬಳ್ಳಿ: ‘ಶಿಕ್ಷಣ ಕಾಶಿ ಎಂದು ಹೆಸರಾಗಿರುವ ಹುಬ್ಬಳ್ಳಿ–ಧಾರವಾಡ ವಾಣಿಜ್ಯ ಕಾಶಿ ಆಗಿಯೂ ಗುರುತಿಸಿಕೊಳ್ಳಬೇಕು’ ಎಂದು ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಆಶಯ ವ್ಯಕ್ತಪಡಿಸಿದರು.

ನಗರದ ಎಪಿಎಂಸಿ ಆವರಣದ ವಿವಿಧೋದ್ದೇಶ ಕೈಗಾರಿಕಾ ಮತ್ತು ವಾಣಿಜ್ಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ (ಕೆಸಿಸಿಐ) ಬುಧವಾರ ಆಯೋಜಿಸಿದ್ದ ಐದು ದಿನಗಳ ‘ಇನ್ಕಾಮೆಕ್ಸ್–2026’ ಬೃಹತ್ ವಸ್ತುಪ್ರದರ್ಶನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಉತ್ತರ ಕರ್ನಾಟಕ ಭಾಗವು ಹೇಗೆ ಬೆಳವಣಿಗೆ ಸಾಧಿಸುತ್ತಿದೆ ಎಂಬುದಕ್ಕೆ ಈ ಮೇಳ ಸಾಕ್ಷಿಯಾಗಿದೆ. ಈ ಭಾಗದ ಅಭಿವೃದ್ಧಿ, ಸವಾಲುಗಳು ಮತ್ತು ಅವಕಾಶಗಳ ಕುರಿತು ಮೇಳದಲ್ಲಿ ಸಾಕಷ್ಟು ವಿಮರ್ಶೆ ಆಗಿದೆ’ ಎಂದರು.

‘ಸರ್ಕಾರದ ಜತೆ ಕೈಗಾರಿಕೆಗಳೂ ಕೈ ಜೋಡಿಸಿದಾಗ ಅಭಿವೃದ್ಧಿ ಸಾಧ್ಯ. ಮೂರು ವರ್ಷಗಳಲ್ಲಿ 3 ಸಾವಿರ ವಾಣಿಜ್ಯೋದ್ಯಮಿಗಳಿಗೆ ಪ್ರೋತ್ಸಾಹ ನೀಡುವ ಚಿಂತನೆ ಇಲ್ಲಿ ನಡೆದಿದೆ. ಇದಕ್ಕೆ ಇಲಾಖೆಗಳ ಬೆಂಬಲವೂ ಇರಲಿದೆ’ ಎಂದು ಭರವಸೆ ನೀಡಿದರು.

ಕಾಮಗಾರಿ ಪೂರ್ಣಗೊಳಿಸಲು ಮನವಿ: ಕೆಸಿಸಿಐ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಮಾತನಾಡಿ, ‘ವಿವಿಧೋದ್ದೇಶ ಕೈಗಾರಿಕಾ ಮತ್ತು ವಾಣಿಜ್ಯ ವಸ್ತುಪ್ರದರ್ಶನ ಕೇಂದ್ರದ ಮಳಿಗೆಗಳ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಅದನ್ನು ಶೀಘ್ರ ಪೂರ್ಣಗೊಳಿಸಬೇಕು. ಇದಕ್ಕೆ ಅಗತ್ಯವಾದ ಅನುದಾನ ಒದಗಿಸಿ, ಸ್ಪೆಷಲ್ ಪರ್ಪಸ್ ವೆಹಿಕಲ್ ಖಾತೆಯಲ್ಲಿರುವ ಬಡ್ಡಿ ಹಣವನ್ನೂ ಬಳಸಿಕೊಳ್ಳಬೇಕು. ಮಳಿಗೆಗಳ ಕಾಮಗಾರಿ ಪೂರ್ಣಗೊಂಡು ಬಾಡಿಗೆಗೆ ನೀಡಿದರೆ ಇಲ್ಲಿ ನಿರಂತರವಾಗಿ ಚಟುವಟಿಕೆಗಳು ನಡೆಯಲಿವೆ’ ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರದರ್ಶಕರು, ಕಾರ್ಯಕ್ರಮಕ್ಕೆ ಶ್ರಮಿಸಿದವರನ್ನು ಗೌರವಿಸಲಾಯಿತು. ಕೆಸಿಸಿಐ ಪದಾಧಿಕಾರಿಗಳಾದ ಉದಯ ರೇವಣಕರ, ಪ್ರವೀಣ ಅಗಡಿ, ಸಿದ್ದೇಶ್ವರ ಕಮ್ಮಾರ, ವೀರಣ್ಣ ಕಲ್ಲೂರ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-24-534544832

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.