ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಹುಬ್ಬಳ್ಳಿ–ಧಾರವಾಡ ಪಾಲಿಕೆ ಫಲಿತಾಂಶ: ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 39 ಸ್ಥಾನಗಳನ್ನು ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 

ಒಟ್ಟು 82 ಸ್ಥಾನಗಳಲ್ಲಿ ಸರಳ ಬಹುಮತಕ್ಕೆ 42 ಸ್ಥಾನ ಗಳಿಸಬೇಕಿತ್ತು. ಬಿಜೆಪಿ 39 ಸ್ಥಾನ ಗಳಿಸಿದೆ. ಜತೆಗೆ ಮೂವರು ಶಾಸಕರು, ಇಬ್ಬರು ವಿಧಾನ ಪರಿಷತ್‌ ಸದಸ್ಯರು ಹಾಗೂ ಸಂಸದರ ಮತ ಹೊಂದಿರುವುದರಿಂದ ಸತತ ಮೂರನೇ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯಲಿದೆ.

ಕಾಂಗ್ರೆಸ್‌ 33, ಮೊದಲ ಬಾರಿಗೆ ಸ್ಪರ್ಧೆಗೆ ಇಳಿದಿದ್ದ ಎಐಎಂಐಎಂ ಮೂರು, ಜೆಡಿಎಸ್‌ 1 ಹಾಗೂ ಪಕ್ಷೇತರರು ಆರು ಮಂದಿ ಗೆಲುವು ಸಾಧಿಸಿದ್ದಾರೆ. 

ಕಳೆದ ಬಾರಿ ಪಾಲಿಕೆಯಲ್ಲಿ 67 ವಾರ್ಡ್‌ಗಳಿದ್ದವು. ಬಿಜೆಪಿ 33, ಕಾಂಗ್ರೆಸ್‌ 22, ಜೆಡಿಎಸ್‌ 9, ಮೂವರು ಪಕ್ಷೇತರರು ಆಯ್ಕೆಯಾಗಿದ್ದರು. ಜೆಡಿಎಸ್‌ಗೆ ತೀವ್ರ ಹಿನ್ನಡೆಯಾಗಿದೆ.

ಪಕ್ಷಗಳ ಬಲಾಬಲ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ

ಬಿಜೆಪಿ 39
ಕಾಂಗ್ರೆಸ್ 33
ಎಐಎಂಐಎಂ 03
ಜೆಡಿಎಸ್ 01
ಪಕ್ಷೇತರ 06
ಒಟ್ಟು 82

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು