ಹುಬ್ಬಳ್ಳಿ: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಜಿಲ್ಲೆಯಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ಮಾಹಿತಿ ಇದ್ದರೂ ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಸದಸ್ಯರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪಾಲಿಕೆ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಸರ್ಕಾರ, ಪಾಲಿಕೆ ವಿರುದ್ಧ ಘೋಷಣೆ ಕೂಗಿದರು. ಮನವಿ ಸ್ವೀಕರಿಸಲು ಪಾಲಿಕೆ ಆರೋಗ್ಯಾಧಿಕಾರಿ ಬಾರದ ಹಿನ್ನೆಲೆಯಲ್ಲಿ ಪಾಲಿಕೆ ಕಚೇರಿ ಎದುರು ಕುಳಿತು ಭಜನೆ ಮಾಡಿ, ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಜಿಲ್ಲಾ ಸಂಯೋಜಕ ಶ್ರೀಧರ ಕಲಬುರ್ಗಿ ಮಾತನಾಡಿ, ‘ಎರಡು ದಿನಗಳಲ್ಲಿ ಅನಧಿಕೃತ ಕಸಾಯಿಖಾನೆಗಳನ್ನು ಬಂದ್ ಮಾಡಿಸಿ, ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದು ಆಗ್ರಹಿಸಿದರು. ಸಮಿತಿಯ ಸಹ ಸಂಯೋಜಕ ರಘು ಯಲ್ಲಕ್ಕನವರ ಮಾತನಾಡಿ, ‘ಅಕ್ರಮವಾಗಿ ಗೋಸಾಗಣೆ ತಡೆಗೆ ಜಿಲ್ಲೆಯ ಎಲ್ಲ ಚೆಕ್ಪೋಸ್ಟ್ಗಳಲ್ಲಿ 24X7 ವಿಶೇಷ ತಪಾಸಣೆ ವ್ಯವಸ್ಥೆ ಜಾರಿಗೊಳಿಸಬೇಕು, ತಾಲ್ಲೂಕುಮಟ್ಟದಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು.

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸಂತೋಷ ಯರಂಗಳಿ ಮನವಿ ಸ್ವೀಕರಿಸಿದರು. ವಿಶ್ವನಾಥ ಬುದ್ದುರ, ಗಣೇಶ ಲದ್ವಾ, ಮಂಜುನಾಥ ಕಾಟಕರ, ಗುರು ಪಾಟೀಲ, ಬಸು ದುರ್ಗದ, ಬಸವರಾಜ ಗೌಡರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-24-1286026615

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.