ಹುಬ್ಬಳ್ಳಿ: ‘ಇ–ಸ್ವತ್ತಿಗೆ ಸಂಬಂಧಿಸಿದಂತೆ ಜನರಿಂದ ಸಾಕಷ್ಟು ದೂರುಗಳು ಬಂದಿದ್ದು, ಸಮಸ್ಯೆ ಪರಿಹರಿಸಬೇಕು. ಮಳೆಗಾಲಕ್ಕೂ ಮುನ್ನ ನಾಲಾ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು, ರಸ್ತೆ ಗುಂಡಿ ಮುಚ್ಚಬೇಕು..’

ಇಲ್ಲಿನ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಮಂಗಳವಾರ ನಡೆದ ಹುಬ್ಬಳ್ಳಿ–ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಅವರು ಅಧಿಕಾರಿಗಳಿಗೆ ನೀಡಿದ ಸೂಚನೆಗಳಿವು.

‘ಇ–ಸ್ವತ್ತು ಪಡೆಯಲು ಆಸ್ತಿ ಮಾಲೀಕರು ಆರರಿಂದ ಎಂಟು ತಿಂಗಳು ಕಾಯುವ ಸ್ಥಿತಿ ಇದೆ. ಇ–ಸ್ವತ್ತು ದಾಖಲೆ ಇಲ್ಲದಿದ್ದರೆ ಆಸ್ತಿ ಮಾರಾಟ ಮಾಡಲು ಆಗುವುದಿಲ್ಲ. ಇದರಿಂದ ಜನರಗೆ ತೊಂದರೆಯಾಗುತ್ತಿದೆ’ ಎಂದರು.

ಇದಕ್ಕೆ ಉತ್ತರಿಸಿದ ವಲಯ ಆಯುಕ್ತ ಚಂದ್ರಶೇಖರಗೌಡ ಮಾಲಿ ಪಾಟೀಲ, ‘ಮೊಬೈಲ್ ಆ್ಯಪ್ ಮೂಲಕವು ಜನರು ಇ–ಸ್ವತ್ತಿಗೆ ಅರ್ಜಿ ಸಲ್ಲಿಸಬಹುದು. ಎಲ್ಲ ದಾಖಲೆಗಳು ಸರಿ ಇದ್ದರೆ ವಾರದಲ್ಲಿ ಇ–ಸ್ವತ್ತು ನೀಡಬಹುದು. ವಿಳಂಬಕ್ಕೆ ತಾಂತ್ರಿಕ ಸಮಸ್ಯೆ ಕಾರಣ’ ಎಂದರು.

‘ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಜನರಿಗೆ ಬೇಗ ಸಿಗುವಂತೆ ಕ್ರಮ ತೆಗೆದುಕೊಳ್ಳಬೇಕು. ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳುವ ಮುನ್ನ ಅಗತ್ಯ ಇರುವ ಕಡೆ ಒಳಚರಂಡಿ ಕಾಮಗಾರಿ ನಡೆಸಬೇಕು. ಇದರಿಂದ ರಸ್ತೆ ಅಗೆಯುವುದು ತಪ್ಪುತ್ತದೆ. ಸೆಂಟ್ರಲ್ ಕ್ಷೆತ್ರ ವ್ಯಾಪ್ತಿಯಲ್ಲಿ 25 ವಾರ್ಡ್ಗಳಿದ್ದು, ಎಲ್ಲೆಲ್ಲಿ ಒಳಚರಂಡಿ ಸೌಲಭ್ಯ ಇಲ್ಲ ಎಂಬುದನ್ನು ಪಟ್ಟಿ ಮಾಡಬೇಕು’ ಎಂದರು.

‘ರಸ್ತೆಗಳು ಹಾಳಾಗಿದ್ದು, ಗುಂಡಿಗಳು ಬಿದ್ದಿವೆ. ರಸ್ತೆ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಶಾಸಕರು ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದಅಧಿಕಾರಿಗಳು, ‘ರಸ್ತೆ ಗುಂಡಿ ಮುಚ್ಚಲು ಟೆಂಡರ್ ಕರೆಯಲಾಗಿದೆ’ ಎಂದು ತಿಳಿಸಿದರು.

ನಾಲಾ, ಚರಂಡಿ ಸ್ವಚ್ಛಗೊಳಿಸಿ: ಮಳೆಗಾಲದಲ್ಲಿ ಪ್ರತಿ ಸಲ ಜಗದೀಶನಗರ ಸೇರಿದಂತೆ ತಗ್ಗು ಪ್ರದೇಶದ ಇತರ ಕಡೆ ಮನೆಗಳಿಗೆ ನೀರು ನುಗ್ಗುವುದು ಸಾಮಾನ್ಯವಾಗಿದೆ. ದೇಶಪಾಂಡೆ ನಗರ ನಾಲಾ, ಗ್ರೀನ್ ಕಾರಿಡಾರ್ನಲ್ಲಿ ಹೂಳು ತುಂಬಿದೆ. ಅವುಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳಬೇಕು. ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ. ಸಮಸ್ಯೆ ಪರಿಹರಿಸಬೇಕು’ ಎಂದು ಶಾಸಕರು ಸೂಚಿಸಿದರು.

ಲೋಕೋಪಯೋಗಿ, ಸಮಾಜ ಕಲ್ಯಾಣ ಇಲಾಖೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಬಿಆರ್ಟಿಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಯಿತು.

ಮೇಯರ್ ಜ್ಯೋತಿ ಪಾಟೀಲ, ಉಪಮೇಯರ್ ಸಂತೋಷ ಚವ್ಹಾಣ್, ಆಯುಕ್ತ ರುದ್ರೇಶ ಘಾಳಿ, ಹುಬ್ಬಳ್ಳಿ ಶಹರ ತಹಶೀಲ್ದಾರ್ ಮಹೇಶ ಗಸ್ತೆ, ಡಿಸಿಪಿ ರವೀಶ್ ಸಿ.ಆರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಉಮೇಶ ಬೊಮ್ಮಕ್ಕನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-24-1762157371

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.