ಹುಬ್ಬಳ್ಳಿ: ನಗರದ ಮಾರುಕಟ್ಟೆ ಪ್ರದೇಶ, ಪ್ರಮುಖ ರಸ್ತೆ ಪಕ್ಕ ಪಾದಚಾರಿ ಮಾರ್ಗ ಅತಿಕ್ರಮಿಸಿಕೊಂಡು ಇಟ್ಟುಕೊಂಡಿರುವ ಡಬ್ಬಾ ಅಂಗಡಿಗಳು ಮತ್ತು ಕಟ್ಟಡಗಳನ್ನು ತೆರವುಗೊಳಿಸಲು ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳು ‘ಆಪರೇಷನ್ ಪುಟ್ಪಾತ್’ ಕಾರ್ಯಾಚರಣೆಯನ್ನು ಸೋಮವಾರ ಆರಂಭಿಸಿದರು.

ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಮಾರ್ಗದರ್ಶನದಲ್ಲಿ ವಲಯಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ನಗರದ ಕೊಪ್ಪಿಕರ್ ರಸ್ತೆ, ಗೋಕುಲ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು.

ಕೊಪ್ಪಿಕರ್ ರಸ್ತೆಯ ಪಾದಚಾರಿ ಮಾರ್ಗದಲ್ಲಿದ್ದ ಬಟ್ಟೆ, ಆಲಂಕಾರಿಕ ವಸ್ತು, ಚಪ್ಪಲಿ ಹಾಗೂ ಇನ್ನಿತರ ವಸ್ತುಗಳ ಮಾರಾಟಕ್ಕೆ ಇಟ್ಟಿದ್ದ ಗೂಡಂಗಡಿಗಳನ್ನು ತೆರವು ಮಾಡಲಾಯಿತು. ಯುರೇಕಾ ಟವರ್ ಎದುರಿನ ಪಾದಚಾರಿ ಮಾರ್ಗದಲ್ಲಿ ವ್ಯಾಪಾರಿಯೊಬ್ಬರು ಸಿಮೆಂಟ್, ಸರಳು ಬಳಸಿ ನಿರ್ಮಿಸಿಕೊಂಡಿದ್ದ ಅಂಗಡಿಯನ್ನು ಸಹ ಅಧಿಕಾರಿಗಳು ತೆರವುಗೊಳಿಸಿದರು.

ಗೋಕುಲ ರಸ್ತೆಯ ಬನ್ನಿಗಿಡ ಸ್ಟಾಪ್ನಿಂದ ಅಕ್ಷಯ ಪಾರ್ಕ್ ವೃತ್ತದವರೆಗೂ ಕಾರ್ಯಾಚರಣೆ ನಡೆಸಿ, ಎಳನೀರು, ಐಸ್ಕ್ರೀಮ್, ತಂಪು ಪಾನೀಯ, ಚಾಟ್ ಮಸಾಲ ಮತ್ತು ಬೇಲ್ ಪುರಿ–ಪಾನಿ ಪುರಿ ಅಂಗಡಿಗಳನ್ನು ತೆರವು ಮಾಡಲಾಯಿತು. ಈ ವೇಳೆ ತೆರವು ಖಂಡಿಸಿ ವ್ಯಾಪಾರಸ್ಥರು ಪಾಲಿಕೆ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದರು.

‘ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದುದರಿಂದ ಸಂಚಾರ ದಟ್ಟಣೆ ಜತೆಗೆ, ಪಾದಚಾರಿಗಳು ಸಂಚರಿಸಲು ಕಷ್ಟವಾಗುತ್ತಿತ್ತು. ಪಾಲಿಕೆ ಸಹಾಯವಾಣಿ ಹಾಗೂ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಈ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿ ಸಹಕಾರದಿಂದ 20ಕ್ಕೂ ಹೆಚ್ಚು ಡಬ್ಬಾ ಅಂಗಡಿಗಳನ್ನು ಹಾಗೂ 30ಕ್ಕೂ ಹೆಚ್ಚು ವ್ಯಾಪಾರಿಗಳನ್ನು ತೆರವು ಮಾಡಿ, ಪಾದಚಾರಿ ಮಾರ್ಗ ಮುಕ್ತಗೊಳಿಸಲಾಗಿದೆ’ ಎಂದು ಪಾಲಿಕೆ ಆಯುಕ್ತ ರುದ್ರೇಶ ಘಾಳಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-24-1020528981

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.