ಹುಬ್ಬಳ್ಳಿ: ‘ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಹೆಚ್ಚುತ್ತಿದ್ದು, ಮೇ 11ರಂದು ಮೊದಲ ಹಂತದ ತೆರವು ಕಾರ್ಯಾಚರಣೆ ನಡೆಯಲಿದೆ’ ಎಂದು ಪಾಲಿಕೆ ಆಯುಕ್ತ ರುದ್ರೇಶ ಘಾಳಿ ತಿಳಿಸಿದರು.

‘ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡು ವ್ಯಾಪಾರ ವಹಿವಾಟು ಮಾಡುವವರಿಗೆ, ಶಾಶ್ವತ ಕಟ್ಟಡ, ಶೆಡ್ ನಿರ್ಮಿಸಿಕೊಂಡವರಿಗೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಲಾಗಿದೆ. ಕೆಲ ಕಡೆ ಕಾರ್ಯಾಚರಣೆ ನಡೆಸಿ ಶೆಡ್ಗಳನ್ನು ತೆರವು ಮಾಡಲಾಗಿದೆ. ವ್ಯಾಪಾರಿಗಳಿಂದ ದಂಡ ಸಹ ಸಂಗ್ರಹಿಸಲಾಗಿದೆ. ಒಂದೆರಡು ದಿನಬಿಟ್ಟು ಮತ್ತೆ ಅಲ್ಲಿಯೇ ಒತ್ತುವರಿ ಮಾಡಿಕೊಳ್ಳುತ್ತಾರೆ. ಇದಕ್ಕೆ ತಾರ್ಕಿಕ ಅಂತ್ಯ ನೀಡಲು ನಿರ್ಧರಿಸಲಾಗಿದೆ’ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

‘ಮೊದಲ ಹಂತದಲ್ಲಿ ಕೊಪ್ಪಿಕರ್ ರಸ್ತೆ, ದುರ್ಗದ ಬೈಲ್ ಸುತ್ತಮುತ್ತ ಕಾರ್ಯಾಚರಣೆ ನಡೆಸಲಾಗುವುದು. ಇದಕ್ಕೆ ಪಾಲಿಕೆ ಆಡಳಿತ ಸಹಕಾರ ನೀಡಿದ್ದು, ಎಲ್ಲ ಸದಸ್ಯರ ಸಹಕಾರ ಕೇಳಲಾಗಿದೆ. ಪಾದಚಾರಿಗಳ ಹಿತದೃಷ್ಟಿಯಿಂದ, ನಗರ ಸೌಂದರ್ಯೀಕರಣ, ವಾಹನಗಳ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಇದು ಸಹಕಾರಿ ಆಗಿದೆ. ಯಾರ ಒತ್ತಡಕ್ಕೂ ಮಣಿಯದೆ ಕಾರ್ಯಾಚರಣೆ ನಡೆಸಲಾಗುವುದು’ ಎಂದು ಹೇಳಿದರು.

‘ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿರುವ ಕುರಿತು ಜನರಿಂದ ನಿರಂತರ ದೂರುಗಳು ಬರುತ್ತಿವೆ. ಕೆಲವೆಡೆ ರಸ್ತೆಯ ಪಕ್ಕದಲ್ಲಿ, ಪಾರ್ಕಿಂಗ್ ನಿಷೇಧಿತ ಪ್ರದೇಶಗಳಲ್ಲಿ ವಾಹನಗಳನ್ನು ನಿಲ್ಲಿಸುತ್ತಾರೆ. ಪಾದಚಾರಿ ಮಾರ್ಗ ಒತ್ತುವರಿಯಲ್ಲದೆ, ರಸ್ತೆಯನ್ನು ಸಹ ಅತಿಕ್ರಮಿಸುತ್ತಾರೆ. ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದು, ಸೋಮವಾರದಿಂದಲೇ ತೆರವು ಕಾರ್ಯ ನಡೆಯಲಿದೆ’ ಎಂದು ಶಾಸಕ ಮಹೇಶ ಟೆಂಗಿನಕಾಯಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-24-783104838

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.