ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಜಿಎಸ್ಟಿ ನ್ಯಾಯಮಂಡಳಿ ಪೀಠ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ವತಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆಯಲಾಗಿದೆ.

ಬೆಂಗಳೂರಿನಲ್ಲಿ ಜಿಎಸ್ಟಿ ನ್ಯಾಯಮಂಡಳಿ ಪೀಠ ಸ್ಥಾಪಿಸಿರುವುದು ಸ್ವಾಗತಾರ್ಹ. ಧಾರವಾಡ ಜಿಲ್ಲೆಯು ಉತ್ತರ ಕರ್ನಾಟಕ ಭಾಗದ ಪ್ರಮುಖ ವಾಣಿಜ್ಯ ಹಾಗೂ ಕೈಗಾರಿಕಾ ಕೇಂದ್ರವಾಗಿದೆ. ಈ ಪ್ರದೇಶದಲ್ಲಿ ಅನೇಕ ಸಣ್ಣ, ಮಧ್ಯಮ ಹಾಗೂ ದೊಡ್ಡ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿದ್ದು, ಜಿಎಸ್ಟಿ ವ್ಯಾಪ್ತಿಗೆ ಒಳಪಡುವ ವ್ಯಾಪಾರಸ್ಥರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹೀಗಾಗಿ ವ್ಯಾಪಾರಸ್ಥರ ಅನುಕೂಲತೆ ಹಾಗೂ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನಕ್ಕಾಗಿ ಜಿಲ್ಲೆಯಲ್ಲಿ ಪೀಠ ಸ್ಥಾಪಿಸಬೇಕು ಎಂದು ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡ್ರು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-24-1590397772

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.