ಹುಬ್ಬಳ್ಳಿ: ಲೋಕಾಯುಕ್ತ ಪೊಲೀಸರು ಹುಬ್ಬಳ್ಳಿ– ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿಗಳಿಗೆ ಶುಕ್ರವಾರ ಭೇಟಿ ನೀಡಿ, ಇಡೀ ದಿನ ಕಡತಗಳನ್ನು ಪರಿಶೀಲಿಸಿದರು.

ಪಾಲಿಕೆ ವ್ಯಾಪ್ತಿಯ 12 ವಲಯ ಕಚೇರಿಗಳಿಗೆ ಬೆಳಿಗ್ಗೆ 10ಕ್ಕೆ ಏಕಕಾಲಕ್ಕೆ ಭೇಟಿ ನೀಡಿದ ಲೋಕಾಯುಕ್ತ ಪೊಲೀಸರು ಭೇಟಿ ನೀಡಿದರು. ವಿವಿಧ ಕಾಮಗಾರಿಗಳ ಬಿಲ್, ಗುತ್ತಿಗೆದಾರರಿಗೆ ಪಾವತಿಯಾದ ಹಣ, ಜಿಎಸ್ಟಿ ಮೊತ್ತ, 15ನೇ ಹಣಕಾಸು ಯೋಜನೆಯಲ್ಲಿ ಸಿಕ್ಕ ಅನುದಾನ ಮತ್ತು ಬಳಕೆ, ವಿಶೇಷ ಅನುದಾನ, ಕಾಮಗಾರಿಗಳ ಗುಣಮಟ್ಟ ಪರಿಶೀಲನಾ ವರದಿ ಸೇರಿ ವಿವಿಧ ಕಡತಗಳನ್ನು ಪರಿಶೀಲಿಸಿದರು.

‘ಸಾರ್ವಜನಿಕರ ದೂರು ಆಧರಿಸಿ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸುತ್ತಾರೆ. ದೂರಿಗೆ ಸಂಬಂಧಿಸಿ ಅಥವಾ ಹಣಕಾಸಿನ ಲೆಕ್ಕದಲ್ಲಿ ಏರುಪೇರಾದರೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಾರೆ’ ಎಂದು ಪಾಲಿಕೆ ಆಯುಕ್ತ ರುದ್ರೇಶ ಘಾಳಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-24-681942804

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.