‘ಕನಿಷ್ಠ ಎರಡು ವರ್ಷ ಇರಬೇಕು’
ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕವಾಗುವವರನ್ನು ಕನಿಷ್ಠ ಎರಡು ವರ್ಷ ವರ್ಗಾವಣೆ ಮಾಡಬಾರದು ಎಂಬ ನಿಯಮ ಇದೆ. ಆದರೆ, ಅಧಿಕಾರ ವಹಿಸಿಕೊಂಡ ಆರು ತಿಂಗಳ ಒಳಗೆ ರುದ್ರೇಶ ಘಾಳಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಪಾಲಿಕೆಯ ಎರಡು ದಶಕಗಳ ಅವಧಿಯಲ್ಲಿ ಮೊದಲ ಬಾರಿಗೆ ಈ ರೀತಿ ಮಾಡಲಾಗಿದೆ ಎಂದು ಪಾಲಿಕೆಯ ಬಿಜೆಪಿ ಸದಸ್ಯರೊಬ್ಬರು ಹೇಳಿದರು. ‘ಆಯುಕ್ತರಾಗಿ ಅಧಿಕಾರ ವಹಿಸಿಕೊಂಡವರು ಅಲ್ಲಿನ ವ್ಯವಸ್ಥೆ ತಿಳಿದುಕೊಂಡು ಸುಧಾರಣೆ ತರಬೇಕೆಂದರೆ ಕನಿಷ್ಠ ಆರು ತಿಂಗಳು ಸಮಯ ಬೇಕು. ಅಷ್ಟರಲ್ಲಿ ವರ್ಗಾವಣೆ ಮಾಡಿದರೆ ಯಾವ ಅಭಿವೃದ್ಧಿ ಕೆಲಸಗಳೂ ಆಗುವುದಿಲ್ಲ’ ಎಂದರು.