ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪಮೇಯರ್ ಆಯ್ಕೆಗೆ ಇದೇ 30ರಂದು ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಸಾಮಾನ್ಯ ಮಹಿಳೆ, ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ‘ಬಿ’ಗೆ ಮೀಸಲಾಗಿದೆ.

ಪಾಲಿಕೆಯ 24ನೇ ಅವಧಿಯ ನೂತನ ಮೇಯರ್ ಸ್ಥಾನಕ್ಕೆ ನಿಗದಿಪಡಿಸಿದ್ದ ‘ಸಾಮಾನ್ಯ ಮಹಿಳೆ’ ಮೀಸಲಾತಿ ಪ್ರಶ್ನಿಸಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ಶಿವು ಮೆಣಸಿನಕಾಯಿ ನ್ಯಾಯಾಲಯದ ಮೊರೆ ಹೋಗಿದ್ದರು. ಆ ನಂತರ ಹೈಕೋರ್ಟ್ನ ಧಾರವಾಡ ಪೀಠ ಮೀಸಲಾತಿಗೆ ತಡೆಯಾಜ್ಞೆ ನೀಡಿತ್ತು. ಶಿವು ಮೆಣಸಿನಕಾಯಿ ತಮ್ಮ ಅರ್ಜಿ ವಾಪಸ್ ಪಡೆದಿದ್ದರಿಂದ ತಡೆಯಾಜ್ಞೆ ತೆರವಾಗಿದ್ದು, ಈಗ ಚುನಾವಣೆಗೆ ದಿನಾಂಕ ನಿಗದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.