ಹುಬ್ಬಳ್ಳಿ: ‘ಎರಡು ತಿಂಗಳಲ್ಲಿ ಹುಬ್ಬಳ್ಳಿ– ಧಾರವಾಡವನ್ನು ಸ್ವಚ್ಛವಾಗಿಸಲು ಕ್ರಮ ಕೈಗೊಳ್ಳಬೇಕು. ಬ್ಲಾಕ್ ಸ್ಪಾಟ್, ಪಾದಚಾರಿ ಮಾರ್ಗ ಒತ್ತುವರಿ ತೆರವು ಮಾಡಬೇಕು’ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ (ಎನ್ಜಿಟಿ) ರಾಜ್ಯಮಟ್ಟದ ಸಮಿತಿ ಅಧ್ಯಕ್ಷ ಸುಭಾಷ್ ಆಡಿ ಸೂಚಿಸಿದರು.

ಘನ ತ್ಯಾಜ್ಯ, ಪಾರಂಪರಿಕ, ಪ್ಲಾಸ್ಟಿಕ್, ಕಟ್ಟಡ ಮತ್ತು ವೈದ್ಯಕೀಯ ತ್ಯಾಜ್ಯ ನಿರ್ವಹಣೆ ನಿಯಮಗಳು– 2016 ಮತ್ತು ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ವಹಣೆ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಮನೆ, ವಾಣಿಜ್ಯ ಮಳಿಗೆ, ಅಂಗಡಿಗಳಿಂದ ಸಮರ್ಪಕವಾಗಿ ಕಸ ಸಂಗ್ರಹಿಸಿ, ವಿಲೇವಾರಿ ಮಾಡದಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿವೆ. ತ್ಯಾಜ್ಯ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ ಏನು ಕ್ರಮ ಕೈಗೊಳ್ಳಲಾಗಿದೆ’ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

‘ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಸಾರ್ವಜನಿಕರು ಜನಪ್ರತಿನಿಧಿಗಳು ಅದರಲ್ಲಿ ಒಳಗೊಳ್ಳುವಂತೆ ಮಾಡಬೇಕು. ಸ್ವಚ್ಛತೆ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕು’ ಎಂದು ಸೂಚಿಸಿದರು.

‘ಎಲ್ಲ ಸರ್ಕಾರಿ, ಖಾಸಗಿ ಶಾಲೆಗಳು ಗ್ರೀನ್ ಕ್ಯಾಂಪಸ್ ಆಗಬೇಕು. ವಾರದಲ್ಲಿ ಒಂದು ದಿನವಾದರೂ ಶಿಕ್ಷಕರು ಮಕ್ಕಳಿಗೆ ಕಸದ ಬಗ್ಗೆ ತಿಳಿವಳಿಕೆ ಮೂಡಿಸಬೇಕು. ಸಸಿ ನೆಟ್ಟು ಬೆಳೆಸಬೇಕು. ಸ್ವಚ್ಛ ಶಾಲೆ ಎಂಬ ಪ್ರಮಾಣಪತ್ರ ನೀಡಬೇಕು’ ಎಂದು ಡಿಡಿಪಿಐ ಎಸ್.ಎಸ್.ಕೆಳದಿಮಠ ಅವರಿಗೆ ಸೂಚಿಸಿದರು.

‘ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಚೀಲ ಬಳಸಲಾಗುತ್ತಿದೆ. ಈ ಬಗ್ಗೆ ಕಾರ್ಯಾಚರಣೆ ನಡೆಸಬೇಕು. ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ಉತ್ಪಾದನೆಯಾಗುವ ಒಣ ಕಸವನ್ನು ಪಾಲಿಕೆಗೆ ನೀಡಬೇಕು. ಹಸಿ ಕಸವನ್ನು ಅವರೇ ನಿರ್ವಹಣೆ ಮಾಡಬೇಕು. ಇಲ್ಲದಿದ್ದರೆ ಅವರಿಗೆ ನೋಟಿಸ್ ನೀಡಬೇಕು’ ಎಂದರು.

‘ವೈದ್ಯಕೀಯ ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಕ್ಕಳ ಗ್ರಾಮ ಸಭೆ ನಡೆಸಿ, ಮಕ್ಕಳಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಅತ್ಯುತ್ತಮ ಗ್ರಾಮ ಪಂಚಾಯಿತಿ, ಅತ್ಯುತ್ತಮ ನಗರ ಸಭೆ ಎಂಬ ರ್ಯಾಂಕಿಂಗ್ ನೀಡಬೇಕು’ ಎಂದು ಹೇಳಿದರು.

‘ಯಾವುದೇ ಕೊಳಚೆ ನೀರು ಜಲಮೂಲಗಳಿಗೆ ಸೇರದಂತೆ ನೋಡಿಕೊಳ್ಳಬೇಕು. ಗಬ್ಬೂರಿನಲ್ಲಿ 40 ಎಂಎಲ್ಡಿ ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕ (ಎಸ್ಟಿಪಿ) ನಿರ್ಮಿಸಲಾಗಿದೆ. ಆದರೆ, ಅಷ್ಟು ಪ್ರಮಾಣದಲ್ಲಿ ತ್ಯಾಜ್ಯ ನೀರು ಸಂಸ್ಕರಣೆಯಾಗುತ್ತಿಲ್ಲ. ಧಾರವಾಡದ ಕೆಲಗೇರಿ ಕೆರೆಗೆ ಕಲುಷಿತ ನೀರು ಸೇರದಂತೆ ಕ್ರಮವಹಿಸಬೇಕು’ ಎಂದರು.

ಬಸ್ ನಿಲ್ದಾಣದ ಸ್ವಚ್ಛತೆ ಕಾಪಾಡಿ; ಬಸ್ ನಿಲ್ದಾಣಗಳಲ್ಲಿ ಕಸ ಎಸೆದವರಿಗೆ ದಂಡ ವಿಧಿಸಬೇಕು. ಸ್ವಚ್ಛತೆ ಕಾಪಾಡಿದ ಬಸ್ ನಿಲ್ದಾಣಗಳನ್ನು ಗುರುತಿಸಿ, ರ್ಯಾಂಕಿಂಗ್ ನೀಡಬೇಕು. ಬಸ್ಗಳಲ್ಲಿ ಕಸದ ಡಬ್ಬಿ ಇಡಬೇಕು. ನಿರ್ವಾಹಕರು ಪ್ರಯಾಣಿಕರಿಗೆ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಎನ್ಡಬ್ಲ್ಯುಕೆಆರ್ಟಿಸಿ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ಅವರಿಗೆ ಸೂಚನೆ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಅವಳಿ ನಗರದಲ್ಲಿ ಮನೆಗಳಿಂದ ಕಸ ಸಂಗ್ರಹಿಸುವ ಕಾರ್ಯದಲ್ಲಿ ಶೇ 99ರಷ್ಟು ಪ್ರಗತಿ ಸಾಧಿಸಲಾಗಿದೆ. 622 ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಲಾಗಿತ್ತು. ಅದರಲ್ಲಿ 395 ತೆರವು ಮಾಡಲಾಗಿದೆ. ಮನೆ ಮನೆಯಿಂದ ಕಸ ಸಂಗ್ರಹಿಸಲು 283 ವಾಹನಗಳಿವೆ ಎಂದರು.

ನೈರುತ್ಯ ರೈಲ್ವೆ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪ್ರೇಮಚಂದ್ರ ಹರಿಜನ್, ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ ನಿಲ್ದಾಣಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಮಾಡಲಾಗಿದ್ದು, ಕಸ ಸಂಗ್ರಹಕ್ಕೆ ಡಬ್ಬಿಗಳನ್ನು ಅಳವಡಿಸಲಾಗಿದೆ. ಮಳೆ ನೀರು ಸಂಗ್ರಹ, ಸೌರ ಶಕ್ತಿ ಬಳಕೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಜಗದೀಶ ಇದ್ದರು.

ಹೋಟೆಲ್, ದೇವಸ್ಥಾನ, ಕಲ್ಯಾಣಮಂಟಗಳಿಗೆ ನೋಟಿಸ್ ನೀಡಿ ಕಟ್ಟಡ ತ್ಯಾಜ್ಯ ಸಮರ್ಪಕವಾಗಿ ವಿಲೇವಾರಿ ಮಾಡಿ ‘ಸ್ವಚ್ಛ ಶಾಲೆ’ ಪ್ರಮಾಣಪತ್ರ ನೀಡಲು ಸೂಚನೆ

ನಗರದಲ್ಲಿ ಅವಶ್ಯಕತೆ ಇರುವ ಕಡೆ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು. ಅವುಗಳನ್ನು ಸರಿಯಾಗಿ ನಿರ್ವಹಣೆ ಮಾಡಿ ಸ್ವಚ್ಛತೆಗೆ ಆದ್ಯತೆ ನೀಡಬೇಕು

-ಸುಭಾಷ್ ಆಡಿ ಅಧ್ಯಕ್ಷ ಎನ್ಜಿಟಿ ರಾಜ್ಯಮಟ್ಟದ ಸಮಿತಿ

‘ದಂಡ ವಿಧಿಸಿ ಪರವಾನಗಿ ರದ್ದುಪಡಿಸಿ’

ಅಂಗಡಿಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿದರೆ ಅವರಿಗೆ ದಂಡ ವಿಧಿಸಿ ವ್ಯಾಪಾರ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಸುಭಾಷ್ ಆಡಿ ಸೂಚಿಸಿದರು. ಅಂಗಡಿಗಳ ಮುಂದೆ ಕಡ್ಡಾಯವಾಗಿ ಹಸಿ ಕಸ ಮತ್ತು ಒಣ ಕಸ ಸಂಗ್ರಹಣೆಗೆ ಪ್ರತ್ಯೇಕ ಡಬ್ಬಿಗಳನ್ನು ಅಳವಡಿಸಬೇಕು. ಅಂಗಡಿಗಳ ಎದುರಿನ ಕಸ ಸಂಗ್ರಹ ಜವಾಬ್ದಾರಿಯನ್ನು ಅವರಿಗೆ ವಹಿಸಬೇಕು ಎಂದರು. ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಪ್ರತಿಕ್ರಿಯಿಸಿ ‘ಈ ಬಗ್ಗೆ ಮುಂದಿನ ಹತ್ತು ದಿನ ವ್ಯಾಪಕ ಪ್ರಚಾರ ನಡೆಸಿ ಜಾಗೃತಿ ಮೂಡಿಸಲಾಗುವುದು. ನಂತರ ಎರಡು ಬಾರಿ ದಂಡ ವಿಧಿಸಲಾಗುವುದು. ಆ ಬಳಿಕವೂ ನಿಯಮ ಉಲ್ಲಂಘಿಸಿದರೆ ವ್ಯಾಪಾರ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.