ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಡಿ.21ರಿಂದ 24ರವರೆಗೆ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಶ್ರೀಧರ ದಂಡಪ್ಪನವರ ಹೇಳಿದರು.

ಇಲ್ಲಿನ ಪಾಲಿಕೆಯ ಆಯುಕ್ತರ ಸಭಾಂಗಣದಲ್ಲಿ ಸೋಮವಾರ ನಡೆದ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಪಾಲಿಕೆ ವ್ಯಾಪ್ತಿಯಲ್ಲಿ 10,15,388 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. 361 ಬೂತ್ಗಳಲ್ಲಿ ಡಿ.21ರಂದು ಲಸಿಕೆ ಕಾರ್ಯಕ್ರಮ ನಡೆಯಲಿದ್ದು, ಡಿ.22ರಿಂದ 24ರವರೆಗೆ ಮನೆಮನೆಗೆ ಹೋಗಿ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು.

ಹುಟ್ಟಿದ ಮಗುವಿನಿಂದ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೆ ಲಸಿಕೆ ಹಾಕಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಈ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಮಾತನಾಡಿ, ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು. ಎಲ್ಲ ಇಲಾಖೆಗಳು ಇದಕ್ಕೆ ಸಹಕಾರ ನೀಡಬೇಕು ಎಂದು ಹೇಳಿದರು.

ಬಸ್ ನಿಲ್ದಾಣ, ರೈಲು ನಿಲ್ದಾಣ, ವಿಮಾನ ನಿಲ್ಧಾಣಗಳಲ್ಲಿ ಲಸಿಕೆ ಹಾಕಲು ವಿಶೇಷ ತಂಡಗಳನ್ನು ನೇಮಿಸಿದ್ದು, ಹಿಂದುಳಿದ ಪ್ರದೇಶಗಳು, ಇಟ್ಟಿಗೆ ಬಟ್ಟಿ, ಅಲೆಮಾರಿ ಜನರು ವಾಸವಿರುವ ಸ್ಥಳದಲ್ಲಿ ಲಸಿಕ ಕಾರ್ಯಕ್ರಮಕ್ಕೆ ತಂಡಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್. ಎಂ. ಹೊನಕೇರಿ, ಡಾ. ಸುಜಾತಾ ಹಸವಿಮಠ, ಡಾ.ಹುಲಗಣ್ಣ ಇಂಜಗನರಿ, ಡಾ. ತನುಜಾ ಕೆ.ಎನ್., ಡಾ. ಶಶಿಧರ ಕಳಸೂರಮಠ, ಮತ್ತು ಪಾಲಿಕೆ ವ್ಯಾಪ್ತಿಯ ಎಲ್ಲ ರೋಟರಿ ಕ್ಲಬ್ಗಳ ಅಧ್ಯಕ್ಷರು, ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.