ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರದ ರಸ್ತೆಯ ಗುಂಡಿಗಳ ದುರಸ್ತಿಗೆ ಸರ್ಕಾರ ಅನುದಾನ ಒದಗಿಸಿಲ್ಲ ಎಂದು ಆರೋಪಿಸಿ ಬಿಜೆಪಿಯವರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ,
ನಗರದ ಎಲ್ಇಎ ಕ್ಯಾಂಟಿನ್ ಬಳಿಯ ರಸ್ತೆ ತಡೆ ನಡೆಸಿದರು. ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿದರು.

ನಗರದ ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ಇದರಿಂದಾಗಿ ಜನರ ಸಂಚಾರಕ್ಕೆ ತೊಂದರೆಯಾಗಿದೆ. ರಸ್ತೆ ಗುಂಡಿಯಿಂದ ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಿದ್ದು, ಗುಂಡಿಗಳನ್ನು ಮುಚ್ಚಲು ರಾಜ್ಯ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು

ಪಾಲಿಕೆ ಸದಸ್ಯರಾದ ಈರೇಶ ಅಂಚಟಗೇರಿ, ಶಂಕರ ಶಳಕೆ, ನಿತೀನ್ ಇಂಡಿ, ತಿಪ್ಪಣ್ಣ ಮಜ್ಜಗಿ, ಮುಖಂಡರಾದ ಸಂಜಯ ಕಪಟಕರ, ಮಂಜುನಾಥ ನಡಟ್ಟಿ, ದೇವರಾಜ ಶಹಾಪೂರ ಪಾಲ್ಗೊಂಡಿದ್ದರು.

‘ರಸ್ತೆ ಗುಂಡಿ ಮುಚ್ಚುವಲ್ಲಿ ಬಿಜೆಪಿ ವಿಫಲ’

ಹು-ಧಾ ಮಹಾನಗರ ಪಾಲಿಕೆಯಲ್ಲಿ 20 ವರ್ಷಗಳಿಂದ ಅಧಿಕಾರ ನಡೆಸುತ್ತಿರುವ ಬಿಜೆಪಿಯವರು ರಸ್ತೆಯ ಗುಂಡಿಗಳನ್ನು ಮುಚ್ಚಿಸಲು ಕ್ರಮ ವಹಿಸಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಎಲ್ಇಎ ಕ್ಯಾಂಟಿನ್ ಬಳಿಯ ರಸ್ತೆ ತಡೆ ನಡೆಸಿ ಗುಂಡಿಗಳಿಗೆ ಹೂವು ಮಾಲೆ ಹಾಕಿ ಪೂಜೆ ಸಲ್ಲಿಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ದೊಡ್ಡ ಗುಂಡಿಗಳಾಗಿವೆ. ವಾಹನ ಸವಾರರು ಚಾಲಕರು ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಗುಂಡಿಗಳನ್ನು ಮುಚ್ಚಿಸಿಲು ಕ್ರಮವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪಾಲಿಕೆ ವಿರೋಧ ಪಕ್ಷದ ನಾಯಕ ಇಮ್ರಾನ್ ಎಲಿಗಾರ ಪಾಲಿಕೆ ಸದಸ್ಯರಾದ ರಾಜಶೇಖರ ಕಮತಿ ಶಂಭುಗೌಡ ಸಾಲಿಮನಿ ದೀಪಾ ನೀರಲಕಟ್ಟಿ ಸುವರ್ಣಾ ಕಲ್ಲಕುಂಟ್ಲ ಕವಿತಾ ಕಬ್ಬೇರ ಮಂಜುನಾಥ ಬಡಕುರಿ ಸೂರವ್ವ ಪಾಟೀಲ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.