ಹುಬ್ಬಳ್ಳಿ: ಯಾವುದೇ ದಾಖಲೆ ಇಲ್ಲದೆ ವಜ್ರದ ನಮೂನೆಯ ಹರಳುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಆರು ಮಂದಿಯನ್ನು ಬಂಧಿಸಿ, ₹3 ಲಕ್ಷ ಮೌಲ್ಯದ ಹರಳುಗಳನ್ನು ವಶಪಡಿಸಿಕೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಗಾಂಧಿನಗರದ ಸಂತೋಷ ಅಗಸೆ, ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಕಳಸೂರಿನ ಕಾಂತೇಶ ಕನಕಣ್ಣವರ, ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿಯ ವೀರೇಂದ್ರ ದೇಶಗತ್ತಿ, ಹುಬ್ಬಳ್ಳಿ ಅಕ್ಕಿಪೇಟೆಯ ರವಿ ಪೂಜಾರ ಹಾಗೂ ಗಿರೀಶ ಚವ್ಹಾಣ್ ಮತ್ತು ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲ್ಲೂಕಿನ ದಾಸ್ತಿಕೊಪ್ಪದ ಈರಣ್ಣ ಕೋಲ್ಕರ ಬಂಧಿತರು.

ಆರೋಪಿಗಳು ಸಿದ್ಧಾರೂಢ ಮಠದ ಮುಖ್ಯದ್ವಾರದ ಬಳಿ ಹರಳಗಳನ್ನು ಸಾಗಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಹರಳು ಮತ್ತು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿನ್ನಾಭರಣ ಕಳವು: ಇಲ್ಲಿನ ಉಣಕಲ್ನ ಟಿಂಬರ್ ಯಾರ್ಡ್ನಲ್ಲಿರುವ ದೋಂಗಡಿ ಫಾರ್ಮ್ ಹೌಸ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಗಲಕೋಟೆಯ ವರ್ಷಾ ಕುಲಕರ್ಣಿ ಅವರ ವ್ಯಾನಿಟಿ ಬ್ಯಾಗ್ನಲ್ಲಿ ಇದ್ದ ₹4.80 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-20-2025482552

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.