ಹುಬ್ಬಳ್ಳಿ: ನಗರದ ಬೈರಿದೇವರಕೊಪ್ಪದ ಅನಿಲ ನೈನೇಗಲಿ ದಂಪತಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ, ಆತಂಕವಾದಿಯೊಂದಿಗೆ ನಂಟು ಹೊಂದಿ, ಹವಾಲಾ ವ್ಯವಹಾರದಲ್ಲಿ ಭಾಗಿಯಾಗಿದ್ದೀರಿ ಎಂದು ಬೆದರಿಸಿ ₹26.50 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಈ ಬಗ್ಗೆ ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ಯಾಸ್ ಸಿಲಿಂಡರ್ ವಶ: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಅನ್ನು ಅಕ್ರಮವಾಗಿ ಆಟೊದಲ್ಲಿ ಸಾಗಾಟ ಮಾಡುತ್ತಿದ್ದ ಮಿಲನ ಕಾಲೊನಿಯ ಸುಲೇಮಾನ್ ಮಕಾಂದಾರ ಅವರನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿ, ನಾಲ್ಕು ಗ್ಯಾಸ್ ಸಿಲಿಂಡರ್ ಮತ್ತು ಆಟೊ ವಶಪಡಿಸಿಕೊಂಡಿದ್ದಾರೆ.

ಆನಂದನಗರ ಶಿವಪುತ್ರ ಮಠದ ಬಳಿ ಆಟೊದಲ್ಲಿ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಸಾಗಾಟ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದರು. ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-24-1325602945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.