ಹುಬ್ಬಳ್ಳಿ: ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರತ್ನ ಭಾರತ ರೈತ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷ ಹೇಮನಗೌಡ ಬಸನಗೌಡ್ರ ಅವರು ಮಂಗಳವಾರ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರಿಗೆ ಮನವಿ ಸಲ್ಲಿಸಿದರು.

‘ಪ್ರಸ್ತುತ 2 ಸಾವಿರ ಟನ್ ಯೂರಿಯಾ ಹಾಗೂ 1,400 ಟನ್ ಡಿಎಪಿ ಗೊಬ್ಬರ ದಾಸ್ತಾನು ಇದೆ. ಆದರೂ ಈ ತನಕ ಸಮರ್ಪಕವಾಗಿ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಣೆಯಾಗುತ್ತಿಲ್ಲ’ ಎಂದು ರೈತ ಮುಖಂಡ ಹೇಮನಗೌಡ್ರ ದೂರಿದರು.

‘ಡಿಎಪಿ ರಸಗೊಬ್ಬರ ಪ್ರತಿ ಬ್ಯಾಗ್ಗೆ ₹1,350 ಸರ್ಕಾರಿ ದರ ನಿಗದಿಯಾಗಿದೆ. ಆದರೆ, ಸಹಕಾರಿ ಸಂಘಗಳಲ್ಲಿ ಬ್ಯಾಗ್ಗೆ ₹1,850 ರಿಂದ ₹2 ಸಾವಿರ ತನಕ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಕೃಷಿ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಂಡಿಲ್ಲ’ ಎಂದರು.

‘ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ಮಾಡಬೇಕು. ಈ ಬಗ್ಗೆ ಸಂಬಂಧಪಟ್ಟ ಸಹಕಾರಿ ಸಂಘಗಳಿಗೆ ಹಾಗೂ ಖಾಸಗಿ ವಿತರಕರಿಗೆ ಸೂಚಿಸಬೇಕು’ ಎಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್., ‘ಹೆಚ್ಚಿನ ದರಕ್ಕೆ ಬಿತ್ತನೆ ಬೀಜ, ಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಸರ್ಕಾರ ನಿಗದಿಪಡಿಸಿದ ದರದಲ್ಲಿಯೇ ವಿತರಣೆಗೆ ಸೂಚಿಸಲಾಗುವುದು’ ಎಂದು ಹೇಳಿದರು.

ಚನ್ನಬಸಪ್ಪ ಸಿದ್ದೂನವರ, ಜಯಪ್ಪ ಕಮಡೊಳ್ಳಿ, ಮೌಲಸಾಬ್, ಬಸವರಾಜ ಮಲ್ಲಿಗೆವಾಡ, ವಿಷ್ಣು ಬಾನೋಜಿ, ಶಿವಾನಂದ ತಳವಾರ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-24-1792898132

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.